ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸೆಡ್ಡು ಹೊಡೆಯಲು ಹೋದ ಕಾಂಗ್ರೆಸ್‌ಗೆ ಮುಖಭಂಗ, ಶತ್ರುಘ್ನ ಬರಿಗೈಯಲ್ಲಿ ವಾಪಸ್!
ಪ್ರಧಾನಿ ನರೇಂದ್ರ ಮೋದಿ ಅವರ ಮಂಗಳೂರು ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಜನರು ಸೇರಿದ್ದರು. ಇದಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಪಕ್ಷ ತರಾತುರಿಯಲ್ಲಿ ಆಯೋಜಿಸಿದ್ದ...

Published On :
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಂಗಳೂರು ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಜನರು ಸೇರಿದ್ದರು. ಇದಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಪಕ್ಷ ತರಾತುರಿಯಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ರಾರಾಚಿಸುತ್ತಿದ್ದು ಕಾರ್ಯಕ್ರಮಕ್ಕೆ ಬರಬೇಕಾಗಿದ್ದ ಶತ್ರುಘ್ನ ಸಿನ್ಹಾ ಬರದೇ ವಾಪಸ್ ಹಿಂತಿರುಗಿದ್ದಾರೆ.
ಮಂಗಳೂರಿನ ಕದ್ರಿ ಮೈದಾನದಲ್ಲಿ ಶನಿವಾರ ಕಾಂಗ್ರೆಸ್ ಸಮಾವೇಶ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಕಾರ್ಯಕರ್ತರಿಲ್ಲದೇ ಸಮಾವೇಶ ಬಿಕೋ ಎನ್ನುತ್ತಿತ್ತು. ಕದ್ರಿ ಮೈದಾನದ ಸಭೆಯಲ್ಲಿ ಶತ್ರುಘ್ನ ಸಿನ್ಹಾ ಮಾತನಾಡಿ ನಂತರ ಮುಡಿಪುವಿಗೆ ತೆರಳಬೇಕಿತ್ತು.
ಆದರೆ ಕದ್ರಿ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಸಂಖ್ಯೆ ವಿರಳ ಇದ್ದಿದ್ದನ್ನು ಮನಗಂಡು ಸಚಿವ ಯುಟಿ ಖಾದರ್ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಮುಡಿಪುವಿಗೆ ಶತ್ರುಘ್ನ ಸಿನ್ಹಾ ಅವರನ್ನು ಕರೆದೊಯ್ದಿದ್ದರು. ಅಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿCongressಕಾಂಗ್ರೆಸ್MANGALURUಮಂಗಳೂರುPoliticsರಾಜಕೀಯಲೋಕಸಭೆ ಚುನಾವಣೆShatrughan Sinhaಶತ್ರುಘ್ನ ಸಿನ್ಹಾLok Sabha polls
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


