ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಹೇಳಲಿ,ಒಂದು ಲೋಟ ಹಾಲು ಕರೆದು ತೋರಿಸಲಿ- ಸಿಎಂ,ನಿಖಿಲ್ ಗೆ ದರ್ಶನ್ ಸವಾಲು
ಸಕ್ಕರೆ ನಾಡು ಮಂಡ್ಯದಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.

Published On :
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಸ್ವಾಭಿಮಾನಿ ಸಮಾವೇಶದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.
ರೈತರ ಮಗ, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರು ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಹೇಳಲಿ, ಒಂದು ಲೋಟ ಹಾಲು ಕರೆದು ತೋರಿಸಲಿ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸವಾಲು ಹಾಕಿದರು
ಸಿನಿಮಾದವರು ಸಿನಿಮಾದವರು ಎನ್ನುತ್ತಾರಲ್ಲ, ಅವರು ನಿರ್ಮಾಪಕರಲ್ವಾ. ಅವರ ಮಗನಿಗಾಗಿ 60 ಕೋಟಿ ರೂ. ಹಾಕಿ ಸಿನಿಮಾ ಮಾಡಿದ್ದು ಸುಳ್ಳಾ. ಅದೇ ದುಡ್ಡನ್ನು ಮಂಡ್ಯದಲ್ಲಿ ವೃದ್ದಾಶ್ರಮ, ಅನಾಥಶ್ರಮ ಮಾಡಿದ್ದರೆ ಪ್ರಚಾರಕ್ಕೆ ಬರುವ ಆಗಿರಲಿಲ್ಲ. ಆಗ ಬಂದು ಅವರು ವೋಟು ಕೇಳಿದ್ದರೆ ನ್ಯಾಯ ಇರುತ್ತಿತ್ತು ಎಂದು ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
ಕೆಲವೇ ಮಂದಿ ಡಿ ಬಾಸ್ ಅಂತಾ ಕರೆಯುತ್ತಿದ್ದರು. ಈಗ ಮುಖ್ಯಮಂತ್ರಿಯಿಂದಾಗಿ ಆ ಹೆಸರು ಕರ್ನಾಟಕದ ಉದ್ದಕ್ಕೂ ಖ್ಯಾತಿಯಾಗಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ತುಂಬಾ ಥ್ಯಾಂಕ್ಸ್ ಹೇಳುವುದಾಗಿ ದರ್ಶನ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD KumaraswamyDarshanಮಂಡ್ಯದರ್ಶನ್MandyaSumalathaಸುಮಲತಾಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿLoksabha Polls 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


