ಬಿಜೆಪಿ ಏಜೆಂಟ್ ರೀತಿಯಲ್ಲಿ ಐಟಿ ಇಲಾಖೆ ವರ್ತನೆ, ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪತ್ರ
ಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿಗರ ಮನೆ, ವಾಣಿಜ್ಯ ಸಂಕೀರ್ಣಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದ್ದು, ಬೆದರಿಸುವ ತಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ

Published On :
ಬೆಂಗಳೂರು: ಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿಗರ ಮನೆ, ವಾಣಿಜ್ಯ ಸಂಕೀರ್ಣಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದ್ದು, ಬಿಜೆಪಿ ವಿರೋಧಿಸುವ ರಾಜಕೀಯ ನಾಯಕರುಗಳು ಹಾಗೂ ಮತದಾರರನ್ನು ಬೆದರಿಸುವ ತಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ಬಿಜೆಪಿ ಬೆಂಬಲಿಗರು ಅಥವಾ ನಾಯಕರ ಮೇಲೆ ದಾಳಿ ನಡೆಸದ ಆದಾಯ ತೆರಿಗೆ ಇಲಾಖೆ ಆಡಳಿತಾರೂಢ ಬಿಜೆಪಿಯ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಆರೋಪಿಸಲಾಗಿದೆ.
ಚುನಾವಣೆಗಾಗಿ ಬಿಜೆಪಿಗೆ ಹಣಕಾಸು ಸಂಗ್ರಹಿಸುತ್ತಿರುವ ರೈಲ್ವೆ ,ಕೇಂದ್ರ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರ ಮೇಲೂ ದಾಳಿ ನಡೆಸುವಂತೆ ಆದಾಯ ತೆರಿಗೆ ಇಲಾಖೆಗೆ ನಿರ್ದೇಶನ ನೀಡುವಂತೆ ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


