ಮಂಡ್ಯ: ದಿಗ್ಗಜರ ಭಾಷಣದ ಸಾರಾಂಶ ಗ್ರಹಿಸಿದ್ದೇನೆ- ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅಂತಿಮ ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಸ್ವಾಭಿಮಾನಿ ಸಮ್ಮಿಲನ ಹೆಸರಿನಲ್ಲಿ ಹೆಸರಿನಲ್ಲಿ ನಡೆಸಿದ ಸಮಾವೇಶದ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ.

ಮಂಡ್ಯ: ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅಂತಿಮ ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಸ್ವಾಭಿಮಾನಿ ಸಮ್ಮಿಲನ ಹೆಸರಿನಲ್ಲಿ ಹೆಸರಿನಲ್ಲಿ ನಡೆಸಿದ ಸಮಾವೇಶದ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟರ್ ಮೂಲಕ ವ್ಯಂಗ್ಯವಾಡಿದ್ದಾರೆ.
ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಪರವಾಗಿ ನಡೆದ ಸಮಾವೇಶದ ದಿಗ್ಗಜರ ಭಾಷಣದ ಸಾರಾಂಶವನ್ನು ಗ್ರಹಿಸಿದ್ದೇನೆ. ನನ್ನ ಬಗ್ಗೆ ಮಾಡಿರುವ ವೈಯಕ್ತಿಕ ಆಪಾದನೆಗಳಿಗೆ ಉತ್ತರ ನೀಡುವ ಶಕ್ತಿ ಮಂಡ್ಯ ಜಿಲ್ಲೆಯ ನನ್ನ ಬಾಂಧವರಿಗಿದೆ. ಉತ್ತರ ಕೊಡುವ ರೀತಿಯೂ ಅವರಿಗೆ ಗೊತ್ತಿದೆ ಎಂದಿದ್ದಾರೆ.
ಅಂಬರೀಷ್ ಹಾಗೂ ನನ್ನ ನಡುವಿನ ಸ್ನೇಹ ಮೂರು ದಶಕಗಳದ್ದು. ಅದು ರಾಜಕಾರಣದ ವ್ಯಾಪ್ತಿಯನ್ನೂ ಮೀರಿದ ಅಪ್ಪಟ ಗೆಳೆತನ. ಈ ಸ್ನೇಹಕ್ಕೆ ಅವರ ಕುಟುಂಬ ಸೂಕ್ತ ಕಾಣಿಕೆ ನೀಡಿದೆ' ಎಂದು ಬೇಸರವೂ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


