ಮಾಧ್ಯಮಗಳು ಪ್ರಧಾನಿ ಮೋದಿ ಪ್ರಚಾರಕ್ಕಿಂತಲೂ ಹೆಚ್ಚು ಸುಮಲತಾ ಪ್ರಚಾರಕ್ಕೆ ಒತ್ತು ನೀಡಿವೆ: ಸಿಎಂ ಕುಮಾರಸ್ವಾಮಿ
ಈ ಬಾರಿಯ ಲೋಕಸಭಾ ಚುನಾವಣೆಯನ್ನು ನಿರ್ಣಾಯಕವೆಂದು ಪರಿಗಣಿಸಲಾಗಿದ್ದು, ಮೇ 23ರಂದು...

Published On :
ರಾಮನನಗರ: ಈ ಬಾರಿಯ ಲೋಕಸಭಾ ಚುನಾವಣೆಯನ್ನು ನಿರ್ಣಾಯಕವೆಂದು ಪರಿಗಣಿಸಲಾಗಿದ್ದು, ಮೇ 23ರಂದು ಹೊರಬೀಳುವ ಫಲಿತಾಂಶ ದೇಶದ ರಾಜಕೀಯ ಸ್ಥಿತಿಗತಿಗಳನ್ನು ಬದಲಿಸಬಲ್ಲುದು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಬದಲಿಸಬೇಕೆಂಬ ಆಶಯವನ್ನು ಮತದಾರರು ಹೊಂದಿದ್ದಾರೆ ಎಂದರು.
ಚುನಾವಣೆಯ ಬಳಿಕ ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯಾಗಲಿದ್ದು, ಬಿಜೆಪಿ ಸರ್ಕಾರವನ್ನು ತೆರವುಗೊಳಿಸುವ ಅವಕಾಶಕ್ಕಾಗಿ ಜನರು ಕಾದಿದ್ದರು ಎಂದು ಹೇಳಿದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಎಚ್ ಡಿಕೆ, “ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು 22 ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆಯಿದೆ. ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಮಾಧ್ಯಮಗಳು ಹೆಚ್ಚು ಪ್ರಚಾರ ನೀಡಿರುವ ಬಗ್ಗೆ ಪ್ರಸ್ತಾಪಿಸಿ, “ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಪುತ್ರ ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ” ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆ ಮತ ಚಲಾಯಿಸಿದ ಎಚ್. ಡಿ ಕುಮಾರಸ್ವಾಮಿ, ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡುವಂತೆ ಮನವಿ ಮಾಡಿದರು.
ಬುದ್ಧಿ ಜೀವಿಗಳು ತಮ್ಮ ಹಕ್ಕು ಚಲಾಯಿಸಿ: ಪ್ರಜಾಪ್ರಭುತ್ವದ ದೊಡ್ಡ ಹಬ್ಬವಾದ ಮತದಾನವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ತಪ್ಪದೆ ಮತ ಚಲಾಯಿಸಿ, ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಬುದ್ಧಿಜೀವಿಗಳು ತಮ್ಮ ಹಕ್ಕು ಚಲಾಯಿಸಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


