ಮತಗಟ್ಟೆ ಅಧಿಕಾರಿಗೆ ಸಚಿವ ಪುಟ್ಟರಾಜು ತರಾಟೆ, ಸುಮಲತಾಗೆ ಮತ ಹಾಕಲು ಪರದಾಡಿದ ಮತದಾರರು
ಇಡೀ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಳಗ್ಗೆಯಿಂದ ಮತದಾನ ...

Published On :
ಮಂಡ್ಯ: ಇಡೀ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಳಗ್ಗೆಯಿಂದ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಮಂಡ್ಯದ ನಾಗಮಂಗಲ ತಾಲೂಕಿನ ಅರಗಿನಮೇಳೆ ಗ್ರಾಮದ ಬೂತ್ ಸಂಖ್ಯೆ 202ರಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಹಾಕಲು ಮತದಾರರು ಪರದಾಡಿದ ಘಟನೆ ನಡೆದಿದೆ.
ಸುಮಲತಾ ಅಂಬರೀಷ್ ಹೆಸರಿನ ಮುಂದಿನ ಬಟನ್ ಎಷ್ಟು ಬಾರಿ ಒತ್ತಿದರೂ ಕೂಡ ಹೆಸರು ಬರುತ್ತಿಲ್ಲ, ಮೂರ್ನಾಲ್ಕು ಬಾರಿ ಒತ್ತಿದ ಮೇಲಷ್ಟೇ ಸುಮಲತಾ ಅವರಿಗೆ ಮತ ಬೀಳುತ್ತಿದೆ ಎಂದು ಮತದಾರರು ಅಸಮಾಧಾನ ವ್ಯಕ್ತಪಡಿಸಿದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಮತ್ತು ಸುಮಲತಾ ಪರ ಬೆಂಬಲಿಗರು, ದೋಷಪೂರಿತ ಮತಯಂತ್ರ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


