ದೇವೇಗೌಡರ ವಿರುದ್ಧ ಪ್ರಚಾರ: ಇಬ್ಬರು ಕಾಂಗ್ರೆಸ್ ನಾಯಕರ ಉಚ್ಚಾಟನೆ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡ ಅವರ ವಿರುದ್ಧ ಪ್ರಚಾರ ಮಾಡಿದ....

Published On :
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡ ಅವರ ವಿರುದ್ಧ ಪ್ರಚಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ ಗೋರ್ಪಡೆ ಅವರು, ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ದೂರಿನ ಹಿನ್ನೆಲೆಯಲ್ಲಿ ಮಧುಗಿರಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್.ರಾಜಗೋಪಾಲ್ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಇವರಿಬ್ಬರೂ ಮಾಜಿ ಪ್ರದಾನಿ ದೇವೇಗೌಡ ಅವರ ಪರ ಪ್ರಚಾರ ನಡೆಸದೆ, ಜಿಲ್ಲಾ ಕಾಂಗ್ರೆಸ್ ಹಾಗೂ ಚುನಾವಣೆ ವೀಕ್ಷಕರ ಸಲಹೆಗಳನ್ನು ಧಿಕ್ಕರಿಸಿ, ಅಭ್ಯರ್ಥಿಯ ವಿರುದ್ಧ ಕಾರ್ಯಾಚರಣೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕೆಪಿಸಿಸಿಗೆ ದೂರು ಸಲ್ಲಿಸಿತ್ತು.
ಮೊಮ್ಮಗ ಪ್ರಜ್ವಲ್ ದೇವೇಗೌಡ ಅವರಿಗೆ ತಮ್ಮ ಸಾಂಪ್ರದಾಯಿಕ ಕ್ಷೇತ್ರ ಹಾಸನವನ್ನು ಬಿಟ್ಟುಕೊಟ್ಟ ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸಿದ್ದರು. ಇದಕ್ಕೆ ಕಾಂಗ್ರೆಸ್ ನ ಕೆಲ ನಾಯಕರಿಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕ್ಷೇತ್ರದಲ್ಲಿ ಏ.18ರಂದು ಚುನಾವಣೆ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


