ಮಂಡ್ಯ: ನಿಖಿಲ್ ಸೋತರೆ ರಾಜಕೀಯ ನಿವೃತ್ತಿ- ಸಿ.ಎಸ್. ಪುಟ್ಟರಾಜು
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತರೆ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.

Published On :
ಮಂಡ್ಯ: ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತರೆ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.
ಮಂಡ್ಯದ ಎಂಟು ಕ್ಷೇತ್ರಗಳಲ್ಲೂ ಸುತ್ತಾಡಿದ್ದು, ಎಲ್ಲಾ ಕಡೆ ನಿಖಿಲ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಎದುರಾಳಿ ಸುಮಲತಾ ಅಂಬರೀಷ್ ವಿರುದ್ಧವಾಗಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುಮಲತಾ ಸಿನಿಮಾದಲ್ಲಿ ಹೇಗೆ ನಟನೆ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಈ ಚುನಾವಣೆಯಲ್ಲಿ ಉತ್ತಮ ನಟನೆ ಮಾಡಿದ್ದಾರೆ. ಅವರ ನಟನೆಗೆ ಮಂಡ್ಯ ಜನರು ಮರಳಾಗುವುದಿಲ್ಲ, ಚೆಲುವರಾಯಸ್ವಾಮಿ ಯಾರ ಪರವಾಗಿ ಕೆಲಸ ಮಾಡಿದ್ದಾರೋ, ಅವರೆಲ್ಲರೂ ಸೋತಿದ್ದಾರೆ. ಅದೇ ರೀತಿ ಸುಮಲತಾ ಕೂಡಾ ಸೋಲಲಿದ್ದಾರೆ ಎಂದು ಭವಿಷ್ಯ ನುಡಿದರು.
ಆದಾಯ ತೆರಿಗೆ ಇಲಾಖೆ ಸಂಸ್ಥೆಯಾಗಿ ಬದಲಾಗಿದೆ. ಐಟಿ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಆದಾಯ ತೆರಿಗೆ ಇಲಾಖೆ ಸಂಸ್ಥೆಯಾಗಿ ಬದಲಾಗಿದೆ. ಐಟಿ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜನರು ನಿಖಿಲ್ ಕುಮಾರಸ್ವಾಮಿ ಅವರಿಗೆ ಮತ ನೀಡಿದ್ದು,ಯಾರೂ ಏನೇ ಹೇಳಿದ್ದರೂ ನಿಖಿಲ್ ಅವರು ಗೆದ್ದೆ ಗೆಲುತ್ತಾರೆ ಒಂದು ವೇಳೆ ಗೆಲ್ಲದಿದ್ದರೆ ರಾಜಕೀಯಕ್ಕೆ ನಿವೃತ್ತಿ ಘೋಷಿಸುವುದಾಗಿ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSಜೆಡಿಎಸ್ಮಂಡ್ಯMandyaಪುಟ್ಟರಾಜುನಿಖಿಲ್ ಕುಮಾರಸ್ವಾಮಿNikhil KumaraswamyPolitics 2019Puttaraju ರಾಜಕೀಯ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


