ಚಿಂಚೋಳಿ, ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಧಿಸೂಚನೆ ಪ್ರಕಟ
ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಮೀಸಲು ಕ್ಷೇತ್ರ ಹಾಗೂ ಸಚಿವ ಸಿ.ಎಸ್.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ...

Published On :
ಬೆಂಗಳೂರು: ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಮೀಸಲು ಕ್ಷೇತ್ರ ಹಾಗೂ ಸಚಿವ ಸಿ.ಎಸ್.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಿದೆ.
ಇದರೊಂದಿಗೆ ನಾಮಪತ್ರ ಸಲ್ಲಿಕೆ ಕಾರ್ಯವೂ ಆರಂಭವಾಗಿದೆ. ಏಪ್ರಿಲ್ 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು ಏಪ್ರಿಲ್ 30 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ಮೇ 2 ನಾಮಪತ್ರ ವಾಪಸಾತಿಗೆ ಅಂತಿಮ ದಿನಾಂಕವಾಗಿರುತ್ತದೆ. ಮೇ 19 ರಂದು ಈ ಎರಡೂ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಮೇ 23 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsರಾಜಕೀಯKarnatakaಕರ್ನಾಟಕವಿಧಾನಸಭೆಉಪಚುನಾವಣೆByelectionVidhana SabheUmesh jadhavಉಮೇಶ್ ಜಾಧವ್C.S Shivalliಸಿ.ಎಸ್ ಶಿವಳ್ಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


