ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಆಗಲ್ಲ: ನಟ ಯಶ್ ಈಗ ಗುಡುಗಿದ್ದೇಕೆ?
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದ್ದು ಇದರ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಆಗುವುದಿಲ್ಲ.

Published On :
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದ್ದು ಇದರ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಆಗುವುದಿಲ್ಲ. ಒಂದು ವೇಳೆ ನನ್ನ ತಂಟೆಗೆ ಬಂದರೆ ನಾನು ಕೂಡ ಸುಮ್ಮನೆ ಇರೋದಿಲ್ಲ ಎಂದು ಗುಡುಗಿದ್ದಾರೆ.
ವಿಶ್ವ ಭೂ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಡ್ಯ ಲೋಕಸಭೆ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ನನ್ನನ್ನು ಬೆಂಬಲಿಸಿದವರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತದೆ ಎಂದು ಆರೋಪಿಸಿದ್ದರು ಎಂದು ಪ್ರಶ್ನಿಸಿದ್ದಕ್ಕೆ ಯಶ್ ಸುಮಲತಾ ಅವರು ತಮ್ಮ ಭಾವನೆಯನ್ನು ಹೇಳಿಕೊಂಡಿದ್ದಾರೆ. ಆದರೆ ನನ್ನನ್ನು ಟಾರ್ಗೆಟ್ ಮಾಡಬೇಕು ಎಂದರೆ ತುಂಬಾ ಕಷ್ಟ ಎಂದಿದ್ದಾರೆ.
ನಾವು ಜನರ ಆಸ್ತಿ. ಅವರಿಂದಲೇ ಬೆಳೆದವರು. ಹಾಗಾಗಿ ನಮ್ಮನ್ನು ಟಾರ್ಗೆಟ್ ಮಾಡುವುದು ಸುಲಭವಲ್ಲ. ಹೇಳಿಕೊಂಡವರೆಲ್ಲಾ ಅವರು ಅಂದುಕೊಂಡಂತೆ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ನಮ್ಮ ತಂಟೆಗೆ ಬಂದರೆ ಅವರು ಕೂಡ ಹುಷಾರಾಗಿರಬೇಕಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
yashPoliticsರಾಜಕೀಯSandalwoodಮಂಡ್ಯMandyaಯಶ್ಸ್ಯಾಂಡಲ್ವುಡ್Rocking Starರಾಕಿಂಗ್ ಸ್ಟಾರ್Sumalatha Ambareeshಸುಮಲತಾ ಅಂಬರೀಶ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


