ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಗತಿಯಲ್ಲಿ, ಜಿದ್ದಾಜಿದ್ದಿಯಲ್ಲಿ ಪ್ರಮುಖರು
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಚಿಕ್ಕೋಡಿ, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್...

Published On :
ಬೆಂಗಳೂರು: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.
ಚಿಕ್ಕೋಡಿ, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ವಿಜಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ಪ್ರಗತಿಯಲ್ಲಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.
ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದ ಬಿ ವೈ ರಾಘವೇಂದ್ರ ಶಿಕಾರಿಪುರ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.
ಇಂದಿನ ಸ್ಪರ್ಧೆಯಲ್ಲಿ ಪ್ರಮುಖವಾಗಿ ಮಲ್ಲಿಕಾರ್ಜುನ ಖರ್ಗೆ, ಅನಂತ ಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ, ಜಿ.ಎಂ. ಸಿದ್ದೇಶ್ವರ್, ಮಧು ಬಂಗಾರಪ್ಪ, ಬಿ.ವೈ. ರಾಘವೇಂದ್ರ, ವಿ.ಎಸ್.ಉಗ್ರಪ್ಪ , ಈಶ್ವರ್ ಖಂಡ್ರೆ, ಪ್ರಹ್ಲಾದ್ ಜೋಶಿ, ವಿನಯ ಕುಲಕರ್ಣಿ, ಸುರೇಶ್ ಅಂಗಡಿ, ಪ್ರಕಾಶ್ ಹುಕ್ಕೇರಿ, ಭಗವಂತ್ ರಾವ್ ಖೂಬಾ, ಗದ್ದಿ ಗೌಡರ್, ಕರಡಿ ಸಂಗಣ್ಣ ಸೇರಿ 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


