ಕರ್ನಾಟಕ

ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಉತ್ತರ ಕರ್ನಾಟಕದಲ್ಲಿ ಇಂದು ಮತದಾನ: ಯಡಿಯೂರಪ್ಪ ಪಾಲಿಗೆ ಸತ್ವ ಪರೀಕ್ಷೆ

ರಾಜ್ಯದಲ್ಲಿ ಇಂದು ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ, ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ನಿಜವಾದ ಪರೀಕ್ಷೆಯಾಗಿದೆ.

ಲಿಂಗಾಯತ ಸಮುದಾಯದ ಪ್ರಾಬಲ್ಯವಿರುವ ಉತ್ತರ ಕರ್ನಾಟಕದಲ್ಲಿ ಇಂದು ಮತದಾನ: ಯಡಿಯೂರಪ್ಪ ಪಾಲಿಗೆ ಸತ್ವ ಪರೀಕ್ಷೆ
ಬಿ.ಎಸ್ ಯಡಿಯೂರಪ್ಪ
Published On :
ಬೆಂಗಳೂರು: ರಾಜ್ಯದಲ್ಲಿ ಇಂದು ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ, ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ನಿಜವಾದ ಪರೀಕ್ಷೆಯಾಗಿದೆ, ಲಿಂಗಾಯತ ಪ್ರಾಬಲ್ಯವಿರುವ ಉತ್ತರ ಕರ್ನಾಟಕ ಭಾಗದಲ್ಲಿ 2014 ರಲ್ಲಿ  14ರ ಪೈಕಿ 11 ರಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. 2018ಲ್ಲಿ ನನಡೆದ ಉಪ ಚುನಾವಣೆಯಲ್ಲಿ ಬಳ್ಳಾರಿ ಕಾಂಗ್ರೆಸ್ ಪಾಲಾಗಿತ್ತು.
ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 18 ರಂದು ಚುನಾವಣೆ ನಡೆದಿದೆ, ಉತ್ತರ ಕರ್ನಾಟಕ ದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವಿನ ನೇರ ಚುನಾವಣೆಯಾಗಿದೆ.ಯಡಿಯೂರಪ್ಪ ನಾಯಕತ್ವದಲ್ಲಿ 2018ರ ವಿಧಾನಸಭೆ ಚುನಾವಣೆ ನಡೆದಿತ್ತು, ಸದ್ಯ ನಡೆಯುತ್ತಿರುವ ಲೋಕಸಭೆ ಚುನಾವಣೆ ಯಡಿಯೂರಪ್ಪಗೆ ಸತ್ವ ಪರೀಕ್ಷೆಯಾಗಿದೆ, ಲಿಂಗಾಯತ ಸಮುದಾಯದ ಪ್ರಬಲ ನಾಯಕನೇ ಅಲ್ಲವೇ ಎಂಬುದಕ್ಕೆ ಈ ಚುನಾವಣೆ ಸಾಕ್ಷಿಯಾಗಲಿದೆ.
ಪಕ್ಷದಲ್ಲಿ ಯಡಿಯೂರಪ್ಪ ಸಾಮರ್ಥ್ಯ ಪರೀಕ್ಷೆಗೂ ಇದು ಸವಾಲಾಗಿದೆ,.  ಲೋಕಸಭೆ ಚುನಾವಣೆ ನಂತರ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ದೃಷ್ಟಿಯಿಂದಲೂ ಯಡಿಯೂರಪ್ಪಗೆ ಇದು ನಿರ್ಣಾಯಕ ಚುನಾವಣೆಯಾಗಿದೆ,ಸಿದ್ದರಾಮಯ್ಯ ಅರಂಥ ಪ್ರಬಲ ಕಾಂಗ್ರೆಸ್ ನಾಯಕರಿಗೂ ಇದು ಸವಾಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ತೋರಿದರೇ ಯಡಿಯೂರಪ್ಪಗೆ ಪ್ಲಸ್ ಪಾಯಿಂಟ್ ಆಗಲಿದೆ.
ಲೋಕಸಭೆ ಚುನಾವಣೆ ನಂತರ ರಾಜ್ಯ ನಾಯಕತ್ವ ಬದಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಆದರೆ ತಾವವು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮುಂದುವರಿಯುವುದಾಗಿ ಯಡಿಯೂರಪ್ಪ ಹೇಳಿದ್ದಾರೆ, ಆದರೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು,
ಇತ್ತೀಚಿನ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಬಿಜೆಪಿಗೆ ಪ್ರಮುಖವಾಗಿದೆ, 2018ರ ಚುನಾವಣೆಯಲ್ಲಿ ಲಿಂಗಾಯತ ಧರ್ಮವನ್ನು ಒಡೆಯುವ ಪ್ರಯತ್ನ ನಡೆದಿತ್ತು ಎಂಬ ಭಾವನೆ ಮೂಡಿತ್ತು, ಆದಾದ ನಂತರ ಸಚಿವರುಗಳಾದ ಡಿ.ಕೆ ಶಿವಕುಮಾರ್ ಮತ್ತು ಎಂಬಿ ಪಾಟೀಲ್ ನೀಡಿದ್ದ ಹೇಳಿಕೆಗಳು ಭಾರಿ ಚರ್ಚೆಗೆ ಕಾರಣವಾಗಿತ್ತು. ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ವಿಚಾರವಾಗಿ ಸಿದ್ದರಾಮಯ್ಯ ಸರ್ಕಾರದಲ್ಲಿ ನಡೆದಿದ್ದ ಬೆಳವಣಿಗೆಗಳ ಕುರಿತು ಡಿ.ಕೆ ಶಿವಕುಮಾರ್ ಕ್ಷಮಾಪಣೆ ಕೇಳಿದ್ದರು. 
ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಅಹಿಂದ ಮತಗಳು ಹೆಚ್ಚಿನ ಪ್ರಮಾಣದಲ್ಲಿವೆ, ಬಿಜೆಪಿಯಲ್ಲಿ ಲಿಂಗಾಯತ ಪ್ರಬಲ ನಾಯಕರಿದ್ದಾರೆ. ಕಾಂಗ್ರೆಸ್ ಕೂಡ ಈ ಭಾಗದಲ್ಲಿ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.