ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ: ಹೆಚ್ ಡಿ ದೇವೇಗೌಡ
ಮೇ 19ರಂದು ನಿಗದಿಯಾಗಿರುವ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಜೆಡಿಎಸ್ ಬೆಂಬಲಿಸಲಿದೆ.

Published On :
ಬೆಂಗಳೂರು: ಮೇ 19ರಂದು ನಿಗದಿಯಾಗಿರುವ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಜೆಡಿಎಸ್ ಬೆಂಬಲಿಸಲಿದೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ವಿಧಾನಸಭೆ ಉಪಚುನಾವಣೆ ನಡೆಯುವ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ತಮ್ಮ ಪಕ್ಷ ಬೆಂಬಲಿಸಲಿದೆ ಎಂದು ಹೇಳಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಧಾರವೊಂದನ್ನು ತೆಗೆದುಕೊಳ್ಳಲಿದ್ದು, ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಎರಡೂ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಗೆ ಸಹಕರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಹಾಲಿ ಶಾಸಕರು, ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರು ಹೃದಯಾಘಾತದಿಂದ ಹಠಾತ್ ನಿಧನ ಹೊಂದಿದ್ದರಿಂದ ಕುಂದಗೋಳ ಕ್ಷೇತ್ರ ತೆರವಾಗಿದ್ದರೆ, ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾದವ್ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರಿಂದ ಚಿಂಚೋಳಿ ವಿಧಾನಸಭಾ ಕ್ಷೇತ್ರ ತೆರವಾಗಿತ್ತು.
ಉಮೇಶ್ ಜಾಧವ್ ಅವರು ಬಿಜೆಪಿ ಸೇರಿದ ನಂತರ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಖರ್ಗೆಯವರು ಮೂರನೇ ಬಾರಿ ಆಯ್ಕೆ ಕೋರಿ ಸ್ಪರ್ಧಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSPoliticsಜೆಡಿಎಸ್HD Devegowdaಹೆಚ್ ಡಿ ದೇವೇಗೌಡKundagolaAssembly By Electionsವಿಧಾನಸಭೆ ಉಪಚುನಾವಣೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


