ನಿಮ್ಮ ಜೊತೆ ಮಾತಾಡಲ್ಲ, ಬಹಿಷ್ಕಾರ ಹಾಕಿದ್ದೇನೆ; ಪತ್ರಕರ್ತರ ಮೇಲೆ ಮತ್ತೆ ಸಿಎಂ ಕುಮಾರಸ್ವಾಮಿ ಗರಂ
ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ನಂತರ ಹೆಚ್ ಡಿ ಕುಮಾರಸ್ವಾಮಿಯವರಿಗೆ ಸುದ್ದಿವಾಹಿನಿಗಳ...

Published On :
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ನಂತರ ಹೆಚ್ ಡಿ ಕುಮಾರಸ್ವಾಮಿಯವರಿಗೆ ಸುದ್ದಿವಾಹಿನಿಗಳ ಮೇಲೆ ಅಭಿಪ್ರಾಯ, ಸಂಬಂಧ ಅಷ್ಟಕಷ್ಟೆ. ತಮ್ಮ ಬಗ್ಗೆ ಇಲ್ಲಸಲ್ಲದ ಆರೋಪ, ಅಪಪ್ರಚಾರವನ್ನು ಮಾಧ್ಯಮಗಳು ಮಾಡುತ್ತವೆ ಎಂಬ ಅಸಮಾಧಾನ ಅವರಿಗೆ. ಹೀಗಾಗಿ ಮಾಧ್ಯಮಗಳ ವಿರುದ್ಧ ಬಹಿರಂಗವಾಗಿಯೇ ಸಿಎಂ ಗರಂ ಆಗಿದ್ದುಂಟು.
ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಕುಮಾರಸ್ವಾಮಿ ಭೇಟಿ ಮಾಡಿದರು. ರಮೇಶ್ ಜಾರಕಿಹೊಳಿ ರಾಜೀನಾಮೆ, ಶಾಸಕರ ಬಂಡಾಯ, ಬಿಜೆಪಿಯ ಆಪರೇಷನ್ ಕಮಲ, ಲೋಕಸಭಾ ಚುನಾವಣೆ ಕ್ಷೇತ್ರವಾರು ಫಲಿತಾಂಶ, ಆಪರೇಷನ್ ಕಮಲ ತಡೆಯಲು ರಚಿಸಬೇಕಾದ ತಂತ್ರಗಳು ಹಾಗೂ ಉಪ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಮಾಡಿಕೊಳ್ಳಬೇಕಾದ ಸಿದ್ಧತೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.
ಸಭೆ ಮುಗಿಸಿ ಹೊಟೇಲ್ ನಿಂದ ಹೊರಗೆ ಬರುವಾಗ ಸಿಎಂ ಬಳಿ ಸುದ್ದಿವಾಹಿನಿ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ ಸಿಎಂ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ನಿಮ್ಮಲ್ಲಿನ ಚರ್ಚೆ ಹಾಗೂ ಸುದ್ದಿಗಳಿಂದ ನಾನು ಬಹಿಷ್ಕಾರ ಹಾಕಿದ್ದೇನೆ. ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ (ಐ ಆಮ್ ಬಾಯ್ಕಾಟಿಂಗ್ ಯುವರ್ ಸೆಲ್ಫ್) ಎಂದು ಹೇಳಿ ಸಿಟ್ಟಿನಿಂದಲೇ ಕಾರು ಹತ್ತಿ ಕುಳಿತರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


