ತುಮಕೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಸಮಸ್ಯೆ ಇಲ್ಲ; ಹೆಚ್ ಡಿ ದೇವೇಗೌಡ
ತುಮಕೂರು ಹಾಲಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣ ಬಂಡಾಯ ...

Published On :
ಬೆಂಗಳೂರು: ತುಮಕೂರು ಹಾಲಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಘೋಷಣೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಭಾನುವಾರ ಪ್ರತಿಕ್ರಿಯೆ ನೀಡಿದ್ದಾರೆ.
ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರು ತುಮಕೂರಿನಲ್ಲಿದ್ದಾರೆ, ಅವರು ಕಾಂಗ್ರೆಸ್ ನ ಎಲ್ಲಾ ಸದಸ್ಯರನ್ನು ಕರೆದು ವಿವಾದ ಇತ್ಯರ್ಥವನ್ನು ಸರಿಪಡಿಸಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ.
ಈ ಮಧ್ಯೆ ತುಮಕೂರಿನಲ್ಲಿ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಕಣಕ್ಕಿಳಿಯುವುದಾಗಿ ಘೋಷಿಸಿದ ಹಿನ್ನಲೆಯಲ್ಲಿ ದೇವೇಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ಭೇಟಿ ಮಾಡಿ ಸುಮಾರು 40 ನಿಮಿಷಗಳ ಕಾಲ ಚರ್ಚೆ ನಡೆಸಿದರು.
ಕ್ಷೇತ್ರ ಹಂಚಿಕೆ ಸೂತ್ರದಂತೆ ತುಮಕೂರು ಕ್ಷೇತ್ರವನ್ನು ನಮಗೆ ಕೊಟ್ಟಿದ್ದೀರಿ. ಈಗ ಅನಗತ್ಯವಾಗಿ ಕ್ಷೇತ್ರದಲ್ಲಿ ಗೊಂದಲ ಮೂಡಿಸಲಾಗುತ್ತಿದೆ. ಇದರಿಂದ ಚುನಾವಣೆಯಲ್ಲಿ ಪರಿಣಾಮ ಬೀರಲಿದೆ. ನಾಳೆ ನಾನು ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕರು ಉಪಸ್ಥಿತರಿಲ್ಲದಿದ್ದರೆ ಬೇರೆ ಸಂದೇಶ ರವಾನೆಯಾಗುತ್ತದೆ ಎಂದು ದೇವೇಗೌಡರು ದಿನೇಶ್ ಗುಂಡೂರಾವ್ ಅವರಿಗೆ ಹೇಳಿದ್ದಾರೆ ಎಂದು ಗೊತ್ತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


