ಕರ್ನಾಟಕ

ಕೆಲವು ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ತೊಂದರೆ: ಸಿಎಂ ಕುಮಾರಸ್ವಾಮಿ ಆರೋಪ

ಮಂಡ್ಯ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಲ್ಲಿ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಬಿಕ್ಕಟ್ಟು ಎದುರಾಗಿದೆ ಎಂಬ...

ಕೆಲವು ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ತೊಂದರೆ: ಸಿಎಂ ಕುಮಾರಸ್ವಾಮಿ ಆರೋಪ
ಸಿಎಂ ಕುಮಾರಸ್ವಾಮಿ
Published On :
ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣೆ ಸ್ಪರ್ಧಾ ಕಣದಲ್ಲಿ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಬಿಕ್ಕಟ್ಟು ಎದುರಾಗಿದೆ ಎಂಬ ವರದಿಗಳಿಗೆ ಪುಷ್ಠಿ ನೀಡುವಂತಹ ಹೇಳಿಕೆಯನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೀಡಿದ್ದಾರೆ. ಕಾಂಗ್ರೆಸ ನ ಕೆಲವು ನಾಯಕರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ತೊಂದರೆಯನ್ನುಂಟುಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.
ನಮ್ಮ ಅಭ್ಯರ್ಥಿಯ ಓಟಕ್ಕೆ ಬ್ರೇಕ್ ಹಾಕಲು ಕೆಲವು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ. ಹಾಗೆಂದು ಕಾಂಗ್ರೆಸ್ ಅಭ್ಯರ್ಥಿಗಳಿರುವಲ್ಲಿ ಜನತಾ ದಳ ಕಾರ್ಯಕರ್ತರು ಹಾಗೆ ಮಾಡಲು ನಾನು ಬಿಡುವುದಿಲ್ಲ. ನಮಗೆ ದೇಶ ಮುಖ್ಯ. ನಮ್ಮ ಅಭ್ಯರ್ಥಿಯನ್ನು ಸೋಲಿಸಲು ಅವರು ಎಷ್ಟು ಪ್ರಯತ್ನಿಸುತ್ತಾರೆ ಎಂದು ನೋಡೋಣ, ಕಾಂಗ್ರೆಸ್ ಗೆ ಬಿಟ್ಟುಕೊಟ್ಟ 20 ಕ್ಷೇತ್ರಗಳಲ್ಲಿ ನಾನು ಮತ್ತು ಜೆಡಿಎಸ್ ಕಾರ್ಯಕರ್ತರು ಈ ರೀತಿ ವರ್ತಿಸುವುದಿಲ್ಲ ಎಂದು ಮಂಡ್ಯದಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.
ಚುನಾವಣೆಗೆ ಮುನ್ನ ತುಮಕೂರಿನಲ್ಲಿ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ ಅನವಶ್ಯಕವಾಗಿ ತೊಂದರೆ ಸೃಷ್ಟಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಈ ಮುನ್ನ ಆರೋಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.