20 ವರ್ಷಗಳ ನಂತರ ಬೆಂಗಳೂರು ದಕ್ಷಿಣದಿಂದ ಬಿ.ಕೆ. ಹರಿಪ್ರಸಾದ್ ಸ್ಪರ್ಧೆ: ಬಿಜೆಪಿ ಅಭ್ಯರ್ಥಿ ಗೆಲುವು ಸಲೀಸು!?
ಅಚ್ಚರಿಯ ಬೆಳವಣಿಗೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಅಭ್ಯರ್ಥಿಯನ್ನಾಗಿ ಎಐಸಿಸಿ...

Published On :
ಬೆಂಗಳೂರು: ಅಚ್ಚರಿಯ ಬೆಳವಣಿಗೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಅಭ್ಯರ್ಥಿಯನ್ನಾಗಿ ಎಐಸಿಸಿ ಘೋಷಿಸಿದೆ.
ಬೆಂಗಳೂರು ಉತ್ತರ ಅಥವಾ ದಕ್ಷಿಣ ಕನ್ನಡದಿಂದ ಹರಿಪ್ರಸಾದ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು, 1991 ರಿಂದಲೂ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಯ ಭದ್ರ ಕೋಟೆಯಾಗಿದೆ,
1991 ರಲ್ಲಿ ವೆಂಕಟಗಿರಿ ಗೌಡರು ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು, ಅದಾದ ನಂತರ ಎಚ್.ಎನ್ ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಬೇರೆಯವರಿಗೆ ಬಿಟ್ಟುಕೊಟ್ಟಿರಲಿಲ್ಲ, 1999ರಲ್ಲಿ ಅನಂತ್ ಕುಮಾರ್ ವಿರುದ್ಧ ಸ್ರರ್ಧಿಸಿ ಸೋತಿದ್ದರು. ಬ್ರಾಹ್ಮಣ ಹಾಗೂ ಒಕ್ಕಲಿಗರ ಪ್ರಾಬಲ್ಯವಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಹರಿಪ್ರಸಾದ್ ಕಣಕ್ಕಿಳಿದಿಸಿರುವುದರಿಂದ ಬಿಜೆಪಿ ಗೆಲ್ಲುವ ಅವಕಾಶ ಸಲೀಸಾಯ್ತು.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ ಕುಮಾರ್ ಕಣಕ್ಕಿಳಿಯಲಿದ್ದಾರೆ ಎಂಬ ನಿರೀಕ್ಷೆ ನಡುವೆ ಬಿಜೆಪಿಯು ಮೊದಲ 2 ಪಟ್ಟಿಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಯನ್ನೇ ಘೋಷಿಸಿಲ್ಲ. ಈ ನಡುವೆ ಪ್ರಧಾನಿ ಮೋದಿಯವರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೂಡ ಕೇಳಿಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್PoliticsರಾಜಕೀಯcandidateB K HariprasadBengaluru Southಬಿ.ಕೆ ಹರಿಪ್ರಸಾದ್ಅಭ್ಯರ್ಥಿ.ಬೆಂಗಳೂರು ದಕ್ಷಿಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


