ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ: ನಿರ್ಮಲಾ ಸೀತಾರಾಮನ್
ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಆಡಳಿತ ಕಾಲದಿಂದ ಆರಂಭವಾದ ಗರೀಬಿ ಹಠಾವೋ ...

Published On :
ಉಡುಪಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಆಡಳಿತ ಕಾಲದಿಂದ ಆರಂಭವಾದ ಗರೀಬಿ ಹಠಾವೋ ಮೊಮ್ಮಗ ರಾಹುಲ್ ಗಾಂಧಿ ಕಾಲದವರೆಗೆ ಬಂದರೂ ನಿವಾರಣೆಯಾಗದಿರಲು ಕಾರಣವೇನೆಂದು ಕಾಂಗ್ರೆಸ್ ನವರೇ ಉತ್ತರಿಸಬೇಕು ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ ಶೋಭಾ ಕರಂದ್ಲಾಜೆಯವರಿಗೆ ಸಾಥ್ ಕೊಡಲು ಅವರು ಆಗಮಿಸಿ ಬೆಳಗ್ಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ನಂತರ ಮಣಿಪಾಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರಧಾನಿ ಮೋದಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದು ಕಾಂಗ್ರೆಸ್ ವಿವಿಧ ರಾಜ್ಯಗಳಲ್ಲಿ ನೀಡಿದ ಭರವಸೆಗಳನ್ನು ಆಡಳಿತಕ್ಕೇರಿದ ಬಳಿಕ ಈಡೇರಿಸಲು ವಿಫಲವಾಗಿದೆ ಎಂದು ದೂರಿದರು.
ನಂತರ ಸಚಿವೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡರು. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯನ್ನು ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಆಯೋಜಿಸಿದ್ದು ರಾಹುಲ್ ಗಾಂಧಿ ಬಡವರಿಗೆ ಮಾಸಿಕ 6000 ರೂಪಾಯಿ ನೀಡುವ ಪೊಳ್ಳು ಭರವಸೆಯನ್ನು ದೇಶದ ಜನ ನಂಬಲ್ಲ. ಬಿಜೆಪಿ ಈಗಾಗಲೇ ಬಡವರಿಗೆ ನೆರವಾಗುವ ನಾನಾ ಯೋಜನೆ ಜಾರಿಗೆ ತಂದಿದೆ ಎಂದು ಹೇಳಿದರು.
ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರೀಯ ವಿದ್ಯಾಲಯ, ಪಾಸ್ ಪೋಟ್೯ ಕೇಂದ್ರ, ಕುಶಲಕರ್ಮಿಗಳ ಕೌಶಲ್ಯಾಭಿವೃದ್ಧಿ ಕೇಂದ್ರ ತಂದಿದ್ದಾರೆ. ಸ್ಟಾರ್ಟಪ್, ಅಟಲ್ ಜಿ ಟಿಂಕರಿಂಗ್ ಲ್ಯಾಬ್ ಕರಾವಳಿಯ ಶಾಲಾ ಕಾಲೇಜುಗಳಲ್ಲಿ ಸ್ಥಾಪಿಸಿ ಮಕ್ಕಳ ಮೂಲಕ ಸಂಶೋಧನೆಗೆ ನೀತಿ ಆಯೋಗ ಅನುದಾನ ನೀಡಿದೆ. ನಿಟ್ಟೆಯಲ್ಲಿ ಸಂಶೋಧನಾ ಹಬ್ ಆರಂಭವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


