ಅನೇಕ ಕಡೆ ಅಯೋಗ್ಯರಿದ್ದಾರೆ, ಆದ್ರೆ ಮೋದಿ ಮುಖ ನೋಡಿ ವೋಟ್ ಹಾಕುತ್ತಾರೆ: ಬಿಜೆಪಿ ಶಾಸಕ ಯತ್ನಾಳ್
ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಆಯ್ಕೆ ಪಕ್ಷದ ನಿರ್ಣಯ. ಅನೇಕ ಕಡೆ ಅಯೋಗ್ಯರೂ ಇದ್ದಾರೆ. ಆದರೆ ಅನಿವಾರ್ಯವಾಗಿ...

Published On :
ಬೆಂಗಳೂರು: ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಆಯ್ಕೆ ಪಕ್ಷದ ನಿರ್ಣಯ. ಅನೇಕ ಕಡೆ ಅಯೋಗ್ಯರೂ ಇದ್ದಾರೆ. ಆದರೆ ಅನಿವಾರ್ಯವಾಗಿ ಮೋದಿ ಮುಖ ನೋಡಿ ವೋಟ್ ಹಾಕುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ತೇಜಸ್ವಿನಿ ಅನಂತಕುಮಾರ್ ಅವರನ್ನು ಭೇಟಿ ಮಾಡಿದ ಯತ್ನಾಳ್, ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ನಿಜಕ್ಕೂ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗಬೇಕಾಗಿತ್ತು. ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದವರು ಅನಂತಕುಮಾರ್ ಮತ್ತು ಯಡಿಯೂರಪ್ಪ. ಕರ್ನಾಟಕದಲ್ಲಿ ಯಾರೂ ಕೂಡ ಲೋಕಸಭಾ ಅಭ್ಯರ್ಥಿಗಳನ್ನು ನೋಡುತ್ತಿಲ್ಲ. ಮೋದಿ ಪ್ರಧಾನಿಯಾಗಬೇಕೆಂದು ಮಾತ್ರ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಇಂತಹ ದುರಂತ ನೋಡಿಕೊಂಡು ಬಂದಿದ್ದೇವೆ ಎಂದರು.
ರಾಜ್ಯದ 28 ಅಭ್ಯರ್ಥಿಗಳನ್ನು ನೋಡಿ ಜನ ಓಟು ಹಾಕುತ್ತಿಲ್ಲ. ಮೋದಿ ನೋಡಿ ಓಟು ಹಾಕುತ್ತಿದ್ದಾರೆ. ಅನೇಕ ಕಡೆ ಪಕ್ಷದ ಅಭ್ಯರ್ಥಿಗಳ ಮುಖ ನೋಡಿದರೆ ಮತ ಹಾಕಲು ಸಾಧ್ಯವಿಲ್ಲ. ಆದರೆ ಅನಿವಾರ್ಯವಾಗಿ ಮೋದಿ ಮುಖ ನೋಡಿ ಮತ ಹಾಕುತ್ತಿದ್ದಾರೆ. ಸತ್ಯ ಒಪ್ಪಿಕೊಂಡಿದ್ದೇನೆ, ಅನೇಕ ಕಡೆ ಅಯೋಗ್ಯರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿbjpಬಿಜೆಪಿPoliticsCandidatesಅಭ್ಯರ್ಥಿಗಳುಬಸನಗೌಡ ಪಾಟೀಲ್ ಯತ್ನಾಳ್Basangouda patil yatnal
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


