ಕರ್ನಾಟಕ

ಮಂಡ್ಯ ಲೋಕಸಭಾ ಕದನ: ಸಿಎಂಗೆ ಸುಮಲತಾ ಪರೋಕ್ಷ ತಿರುಗೇಟು

ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆ ಪಕ್ಷೇತರ ಅಭ್ಯರ್ಥಿಯಾಗಿ ...

ಮಂಡ್ಯ ಲೋಕಸಭಾ ಕದನ: ಸಿಎಂಗೆ ಸುಮಲತಾ ಪರೋಕ್ಷ ತಿರುಗೇಟು
ಸುಮಲತಾ
Published On :
ಬೆಂಗಳೂರು: ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಷ್ ತೀವ್ರ ಪೈಪೋಟಿ ನೀಡುತ್ತಿರುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ. ಇದರಿಂದ ಸಹಜವಾಗಿಯೇ ಇಬ್ಬರೂ ಅಭ್ಯರ್ಥಿಗಳ ಕಡೆಯಿಂದ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.
ನಿನ್ನೆ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮುನ್ನ ಮತ್ತು ನಂತರ ಮಂಡ್ಯದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಸುಮಲತಾ ಮತ್ತು ಅವರಿಗೆ ಬೆಂಬಲ ನೀಡುತ್ತಿರುವ ನಟರಾದ ದರ್ಶನ್ ಮತ್ತು ಯಶ್ ವಿರುದ್ಧ ಸಿಎಂ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದರು.
ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ತಿರುಗೇಟು ನೀಡಿರುವ ಸುಮಲತಾ ಭಾರತೀಯ ಪ್ರಜಾಪ್ರಭುತ್ವದ ಘನತೆಯನ್ನು ಗಾಂಭೀರ್ಯವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ, ನಾನು ದಬ್ಬಾಳಿಕೆಗಳಿಗೆ ಬೆದರಿಕೆಗಳಿಗೆ ಬಗ್ಗದ ಜಗ್ಗದ, ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ಅತ್ಯಂತ ಉದಾತ್ತವಾದ ಆದರ್ಶಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.