ಕರ್ನಾಟಕ

ಚುನಾವಣೆ 2019: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪ್ರತಿಕ್ರಿಯೆ

ಅಚ್ಚರಿ ಎಂಬಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಪಡೆದ ತೇಜಸ್ವಿ ಸೂರ್ಯ ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಧನ್ಯವಾದ ಹೇಳಿದ್ದಾರೆ.

ಚುನಾವಣೆ 2019: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪ್ರತಿಕ್ರಿಯೆ
ಸಂಗ್ರಹ ಚಿತ್ರ
Published On :
ಬೆಂಗಳೂರು: ಅಚ್ಚರಿ ಎಂಬಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಪಡೆದ ತೇಜಸ್ವಿ ಸೂರ್ಯ ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಧನ್ಯವಾದ ಹೇಳಿದ್ದಾರೆ.
ತಡರಾತ್ರಿಯಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರಗಳಿಗೆ ಬಿಜೆಪಿ ಅಂತಿಮ ಕ್ಷಣದಲ್ಲಿ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ ಸ್ಪರ್ಧೆ ಖಚಿತವಾಗಿದೆ. 
ಇದರ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ತೇಜಸ್ವಿ ಸೂರ್ಯ ಅವರು, ' ನಿಜಕ್ಕೂ ನನ್ನಿಂದ ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. 28 ವರ್ಷದ ಯುವಕ ಕೂಡ ಸಂಸತ್ತಿಗೆ ಸ್ಪರ್ಧಿಸುವುದು ಮೋದಿ ನಾಯಕತ್ವದಿಂದ ಮಾತ್ರ ಸಾಧ್ಯ. ನನಗೆ ಇಂತಹ ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ಈ ಅವಕಾಶವನ್ನು ಸದ್ಭಳಕೆ ಮಾಡಿಕೊಂಡ ನನ್ನ ಕೊನೆಯ ಉಸಿರಿರುವವರೆಗೂ ದೇಶಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.
ಅಂತೆಯೇ ಮಾಜಿ ಕೇಂದ್ರ ಸಚಿವ ದಿ.ಅನಂತ್ ಕುಮಾರ್ ಮತ್ತು ಅವರ ಧರ್ಮಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೂ ಧನ್ಯವಾದ ಹೇಳಿರುವ ತೇಜಸ್ವಿ ಸೂರ್ಯ, ನಾನು ಇಂದು ಏನೇ ಆಗಿದ್ದರೂ ಅದಕ್ಕೆ ಅನಂತ್ ಕುಮಾರ್ ಅವರು ಮತ್ತು ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರೇ ಕಾರಣ. ಅನಂತ್ ಕುಮಾರ್ ಅವರು ನನ್ನ ಸಾರ್ವಜನಿಕ ಬದುಕಿನ ಮೊದಲ ಗುರುಗಳು.. ನನ್ನ ಶಾಲಾ ದಿನಗಳಿಂದಲೂ ಅವರು ನನ್ನನ್ನು ನೋಡಿದ್ದಾರೆ. ಅವರಿಂದ ನಾನು ಸಾಕಷ್ಟು ಕಲಿತಿದ್ದೇನೆ. ಅಂತೆಯೇ ಜನ ಚೇತನ ಯಾತ್ರೆಗೆ ನಾನು ಅನಂತ್ ಕುಮಾರ್ ಅವರೊಂದಿಗೆ ತೆರಳಲು ತೇಜಸ್ವಿನಿ ಅನಂತ್ ಕುಮಾರ್ ಅವರೇ ಕಾರಣ. ಆವರ ಹೇಳಿದ ಮಾತಿನಿಂದಲೇ ಅನಂತ್ ಕುಮಾರ್ ಅವರು ತಮ್ಮ ಜೊತೆ ನನ್ನನ್ನೂ ಕರೆದುಕೊಂಡು ಹೋಗಿದ್ದರು ಎಂದು ತೇಜಸ್ವಿ ಸೂರ್ಯ ಹಳೆಯ ಘಟನೆಗಳನ್ನು ಮೆಲುಕು ಹಾಕಿದ್ದಾರೆ.
ತೇಜಸ್ವಿ ಸೂರ್ಯ ಅವರ ಸರಣಿ ಟ್ವೀಟ್ ಇಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.