ಕರ್ನಾಟಕ

ಭಾರೀ ವಿರೋಧದ ನಡುವೆ ದೇವೇಗೌಡರ ಪರ ತುಮಕೂರಿನಲ್ಲಿ ಡಿಸಿಎಂ ಪರಮೇಶ್ವರ್ ಪ್ರಚಾರ!

ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಸಮ್ಮಿಶ್ರ ಸರ್ಕಾರದ ಮೈತ್ರಿ ಅಭ್ಯರ್ಥಿ ಎಚ್.ಡಿ ದೇವೇಗೌಡ ಅವರ ಪರವಾಗಿ ಪ್ರಚಾರ ಮಾಡಲು ಡಿಸಿಎಂ ...

ಭಾರೀ ವಿರೋಧದ ನಡುವೆ ದೇವೇಗೌಡರ ಪರ ತುಮಕೂರಿನಲ್ಲಿ ಡಿಸಿಎಂ ಪರಮೇಶ್ವರ್ ಪ್ರಚಾರ!
ರಮೇಶ್ವರ್
Published On :
ತುಮಕೂರು: ತುಮಕೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಸಮ್ಮಿಶ್ರ ಸರ್ಕಾರದ ಮೈತ್ರಿ ಅಭ್ಯರ್ಥಿ  ಎಚ್.ಡಿ ದೇವೇಗೌಡ ಅವರ ಪರವಾಗಿ ಪ್ರಚಾರ ಮಾಡಲು ಡಿ,ಸಿಎಂ ಪರಮೇಶ್ವರ್ ನಿರ್ಧರಿಸಿದ್ದಾರೆ. 
ತುಮಕೂರಿನಲ್ಲಿ ಬಂಡಾಯ ಅಭ್ಯರ್ಥಿಯಾಗಿ ದೇವೇಗೌಡರ ವಿರುದ್ಧ ಸಂಸದ ಮುದ್ದ ಎಸ್ ಪಿ ಮುದ್ದ ಹನುಮೇಗೌಡ ಕಣಕ್ಕಿಳಿದಿದ್ದಾರೆ, ಪಕ್ಷದ ಟಿಕೆಟ್ ಸಿಗದಿದ್ದಕ್ಕೆ ಮಾಜಿ ಶಾಸಕ ಕೆ.ಎನ್ ರಾಜಣ್ಣ ಬಂಡಾಯವಾಗಿ ಸ್ಪರ್ಧಿಸಿದ್ದಾರೆ.
ದೇವೇಗೌಡರ ಪರ ಪ್ರಚಾರ ಮಾಡುವ ಸಂಬಂಧ ಎರಡು ಪಕ್ಷಗಳು ಸಭೆ ನಡೆಸಿದ್ದು, ಪರಮೇಶ್ವರ್ ಮತ್ತು ಸಚಿವ ಎಸ್.ಆರ್ ಶ್ರೀನಿವಾಸ್ ತುಮಕೂರಿನ ಎಲ್ಲಾ 8 ಕ್ಷೇತ್ರಗಳಲ್ಲೂ ಎರಡು ಪಕ್ಷದ ಕಾರ್ಯಕರ್ತರು ಸಭೆ ನಡೆಸಲು ನಿರ್ಧರಿಸಿದ್ದಾರೆ, ಎಪ್ರಿಲ್ 1 ರಿಂದ ಎರಡು ಪಕ್ಷದ ಕಾರ್ಯಕರ್ತರು ಒಟ್ಟಾಗಿ ಪ್ರಚಾರ ಕೈಗೊಳ್ಳಲಿದ್ದಾರೆ, ದೇವೇಗೌಡರು ಪ್ರಚಾರಕ್ಕೆ ಬಂದಾಗ ಯಾವುದೇ ರೀತಿಯ ಮುಜುಗರ ಉಂಟಾಗದಂತೆ ತಡೆಯಲು ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗುತ್ತಿದೆ.
ಏಪ್ರಿಲ್4 ಮತ್ತು 5 ರಂದು ದೇವೇಗೌಡರು ತುಮಕೂರಿನ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ, ದೇವೇಗೌಡರು ಬೇರೆ ಎಲ್ಲಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಬೇಕಾಗಿರುವುದರಿಂದ ತುಮಕೂರಿನಲ್ಲಿ ಶೇ.50 ರಷ್ಟು ಮಾತ್ರ ಸಮಯ ಕಳೆಯಲಿದ್ದಾರೆ, ಉಳಿದ ಎಲ್ಲಾ ಪ್ರಚಾರವನ್ನು ಪರಮೇಶ್ವರ್ ಮತ್ತು ಎಸ್ ಆರ್ ಶ್ರೀನಿವಾಸ್ ಮಾಡಲಿದ್ದಾರೆ ಎಂದು ಮಾಜಿ ಎಂಎಲ್ ಸಿ ರಮೇಶ್ ಬಾಬು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.