ಕರ್ನಾಟಕ

ಮಂಡ್ಯದಲ್ಲಿ ಮತ್ತೆ ದರ್ಶನ್, ಯಶ್ ಪ್ರಚಾರ: ಸುಮಲತಾ ಪರ ಶಕ್ತಿ ಪ್ರದರ್ಶನಕ್ಕೆ ಯೋಜನೆ

ಹೈ ವೋಲ್ಟೆಜ್ ಕಣವಾಗಿ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಮುಂದಿನ ತಿಂಗಳು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ ಪ್ರಚಾರಕ್ಕೆ ಧಮುಕ್ಕಲಿದ್ದು, ಪ್ರಚಾರದ ಕಣ ಮತ್ತಷ್ಟು ರಂಗುಪಡೆದುಕೊಳ್ಳಲಿದೆ.

ಮಂಡ್ಯದಲ್ಲಿ ಮತ್ತೆ ದರ್ಶನ್, ಯಶ್ ಪ್ರಚಾರ: ಸುಮಲತಾ ಪರ ಶಕ್ತಿ ಪ್ರದರ್ಶನಕ್ಕೆ ಯೋಜನೆ
ಸಾಂದರ್ಭಿಕ ಚಿತ್ರ
Published On :

ಮಂಡ್ಯ: ಹೈ ವೋಲ್ಟೆಜ್ ಕಣವಾಗಿ ಗಮನ ಸೆಳೆದಿರುವ  ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ  ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್  ಮುಂದಿನ ತಿಂಗಳು  ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಪರ  ಪ್ರಚಾರಕ್ಕೆ ಧಮುಕ್ಕಲಿದ್ದು, ಪ್ರಚಾರದ ಕಣ ಮತ್ತಷ್ಟು ರಂಗುಪಡೆದುಕೊಳ್ಳಲಿದೆ.

ಸ್ಟಾರ್ ನಟರ ಪ್ರಚಾರದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 2 ರಿಂದ ಏ. 15 ರ ತನಕ ಸುಮಲತಾ ಪರ ಪ್ರಚಾರದ ಕಣಕ್ಕಿಳಿಯಲಿರುವ ದರ್ಶನ್, ಹಾಗೂ ಯಶ್,  ಪ್ರತ್ಯೇಕವಾಗಿ ಪ್ರಚಾರ ಹಾಗೂ ರೋಡ್ ಶೋ ನಡೆಸಲಿದ್ದಾರೆ.

ಏಪ್ರಿಲ್ 16 ರಂದು ಚುನಾವಣಾ ಪ್ರಚಾರದ ಕಡೆಯ ದಿನವಾಗಿದ್ದು, ಆ ದಿನ ಮಂಡ್ಯ ನಗರದಲ್ಲಿ ಬೃಹತ್ ಸಮಾವೇಶ ನಡೆಸಿ ಸುಮಲತಾ ಅಂಬರೀಷ್ ಪರ ಶಕ್ತಿ ಪ್ರದರ್ಶನ ಮಾಡಲು ಯೋಜನೆ ರೂಪಿಸಿದ್ದಾರೆ.
ಜೆಡಿಎಸ್ ಪ್ರಚಾರಕ್ಕೆ ಸೆಡ್ಡು ಹೊಡೆಯಲು ಮೂವರು ಪ್ರತ್ಯೇಕವಾಗಿ ಪ್ರಚಾರ, ರೋಡ್ ಶೋ ನಡೆಸಲು ಮುಂದಾಗಿದ್ದು,  ಒಟ್ಟು 13 ದಿನ ಸಕ್ಕರೆ ನಾಡಲ್ಲಿ ಭರ್ಜರಿ ಪ್ರಚಾರ ನಡೆಸಲು ಸ್ಯಾಂಡಲ್ ವುಡ್ ಸ್ಟಾರ್ ಗಳನ್ನು ಹೊಂದಾಗಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.