ಹೌದು, ನನ್ನದು ನಗು ಮುಖ, ಧನಾತ್ಮಕ ಚಿಂತನೆ: ವೈಯಕ್ತಿಕ ಟೀಕೆಗೆ ಸದಾನಂದ ಗೌಡ ಟಾಂಗ್
ವೈಯಕ್ತಿಕವಾಗಿ ಆರೋಪ ಮಾಡಿದ್ದಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಟ್ವಿಟರ್ ಮೂಲಕ ಟಾಂಗ್ ನೀಡಿದ್ದಾರೆ.

Published On :
ಬೆಂಗಳೂರು: ವೈಯಕ್ತಿಕವಾಗಿ ಆರೋಪ ಮಾಡಿದ್ದಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಟ್ವಿಟರ್ ಮೂಲಕ ಕಾಂಗ್ರೆಸ್ , ಜೆಡಿಎಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.
ಹೌದು ನನ್ನದು ನಗು ಮುಖ, ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ. ಅದಕ್ಕೆ ನಾನು ನಗು ಮುಖದಲ್ಲಿ ಇರುತ್ತೇನೆ. ಗಂಡನನ್ನು ಕಳೆದುಕೊಂಡವರ ಬಗ್ಗೆ ಕೀಳಾಗಿ ಮಾತನಾಡುವ ಋಣಾತ್ಮಕ ಚಿಂತನೆ ನನಗೆ ಯಾವತ್ತೂ ಬಂದಿಲ್ಲ. ಅಧಿಕಾರಕ್ಕೋಸ್ಕರ ಬದುಕಿ ಬಂದ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಂಡು ಹೀನವಾಗಿ ಬದುಕುವ ಜಾಯಮಾನ ನನ್ನದಲ್ಲ ಎಂದು ಟ್ವೀಟ್ ಮಾಡಿದ್ದಾರೆ..
ಬೆಂಗಳೂರು ಉತ್ತರ ಕ್ಷೇತ್ರದ ಸಂಸದನಾಗಿ ನಾನೇನು ಮಾಡಿದ್ದೇನೆ ಎಂದು ನನ್ನ ಜನರಿಗೆ ಗೊತ್ತಿದೆ. ಸಾಂದರ್ಭಿಕ ಮೈತ್ರಿ ಮಾಡಿಕೊಂಡು ಜನರನ್ನು ಏಮಾರಿಸಲು ಹೊರಟ ಹಗಲು ವೇಷಗಾರರಿಗೆ ಮನದಟ್ಟು ಮಾಡುವ ಅಗತ್ಯ ನನಗಿಲ್ಲ ಎಂದಿದ್ದಾರೆ.
ನಮ್ಮೊಂದಿಗೆ ಮೋದಿಯಂತಹ ಮೋದಿಜಿಯವರಿದ್ದಾರೆ. ಮೋದಿಜಿಯವರ ಜೊತೆಗಿದ್ದರೆ ದೇಶ ಸುರಕ್ಷಿತ ಎನ್ನುವ ಕೋಟಿ ಕೋಟಿ ಜನರಿದ್ದಾರೆ. ನೀವು ಎದೆಯುಬ್ಬಿಸಿ 2/3 ಹೇಳಿಕೊಳ್ಳುವಂತಹ ನಿಷ್ಕಳಂಕ ಚಾರಿತ್ರ್ಯದ ಒಬ್ಬನೇ ಒಬ್ಬ ನಾಯಕ ನಿಮ್ಮಲ್ಲಿದ್ದಾನೆ ಎನ್ನುವ ಛಾತಿ ನಿಮಗಿದೆಯಾ ? ರಾಜಕೀಯವನ್ನು ರಾಜಕೀಯವಾಗಿ ನಡೆಸಿ, ವೈಯಕ್ತಿಕ ನಿಂದನೆ ನಿಮ್ಮ ತೂಕವನ್ನು ಅಳೆಯುತ್ತದೆ ಎನ್ನುವ ಭಾವನೆ ನಿಮಗಿರಲಿ. ಜನ ಗಮನಿಸುತ್ತಾರೆಂಬ ಕನಿಷ್ಠ ಪ್ರಜ್ಞೆ ಕೂಡ ಇರಲಿ ಎಂದು ಮೈತ್ರಿ ಪಕ್ಷದ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Politicsoppositionವಾಗ್ದಾಳಿಲೋಕಸಭಾ ಚುನಾವಣೆಸದಾನಂದಗೌಡಪ್ರತಿಪಕ್ಷಗಳುLoksabha pollSadanandagowdaPersonal CommentsSlam ರಾಜಕೀಯವೈಯಕ್ತಿಕ ಟೀಕೆಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


