ಕರ್ನಾಟಕ

ಹೈಕಮಾಂಡ್ ಒತ್ತಡಕ್ಕೆ ಮಣಿದ ಮುದ್ದಹನುಮೇಗೌಡ: ನಾಮಪತ್ರ ಹಿಂಪಡೆಯಲು ನಿರ್ಧಾರ

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಒತ್ತಡಕ್ಕೆ ಮಣಿದು ...

ಹೈಕಮಾಂಡ್ ಒತ್ತಡಕ್ಕೆ ಮಣಿದ ಮುದ್ದಹನುಮೇಗೌಡ: ನಾಮಪತ್ರ ಹಿಂಪಡೆಯಲು ನಿರ್ಧಾರ
ಮುದ್ದಹನುಮೇಗೌಡ
Published On :
ತುಮಕೂರು: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಂಸದ ಮುದ್ದಹನುಮೇಗೌಡ  ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರ ಒತ್ತಡಕ್ಕೆ ಮಣಿದು ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಮಾನಸಿಕವಾಗಿ ಬೇಸರಗೊಂಡಿರುವ ಮುದ್ದಹನುಮೇಗೌಡ ಈ ಸಂಬಂಧ ತಮ್ಮ ಆಪ್ತ ರಾಯಸಂದ್ರ ರವಿಕುಮಾರ್ ಅವರಿಗೆ ಸೂಚನೆ ನೀಡಿದ್ದು, ಡಿಸಿ ಕಚೇರಿಗೆ ತೆರಳಿ ನಾಮಪತ್ರ ಹಿಂಪಡೆಯುವಂತೆ ಹೇಳಿದ್ದಾರೆ.
ಇಂದು ಬೆಳಗ್ಗೆ ಸಂಜಯನಗರದಲ್ಲಿರುವ ಮುದ್ದಹನುಮೇಗೌಡ ಅವರ ನಿವಾಸಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಡಿಸಿಎಂ ಪರಮೇಶ್ವರ್ ಚರ್ಚಿಸಿ ಮನವೊಲಿಸಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗದಂತ ಯಾವ ನಿರ್ಧಾರವನ್ನು ಕೈಗೊಳ್ಳದಂತೆ ಮುದ್ದಹನುಮೇಗೌಡರಲ್ಲಿ ಮನವಿ ಮಾಡಿದ್ದರು.ಈ ಹಿನ್ನೆಲೆಯಲ್ಲಿ  ಮುದ್ದ ಹನುಮೇಗೌಡರು ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.