ಕರ್ನಾಟಕ

ಬಿಜೆಪಿ 22 ಸ್ಥಾನ ಗೆದ್ರೆ, ಮರುದಿನವೇ ಕುಮಾರಸ್ವಾಮಿ ಮನೆಗೆ: ವೀರಪ್ಪ ಮೊಹ್ಲಿ ಎಚ್ಚರಿಕೆ!

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೇನಾದರೂ 22 ಸ್ಥಾನ ಬಂದರೆ ಮರುದಿನವೇ ಜೆಡಿಎಸ್ ನ ಮುಖ್ಯಮಂತ್ರಿ ಕುಮಾರಸ್ವಾಮಿ ಮನೆಗೆ ಹೋಗ್ತಾರೆ ಎಂದು ಮೈತ್ರಿ ಅಭ್ಯರ್ಥಿ ಡಾ. ಎಂ ವೀರಪ್ಪಮೊಯ್ಲಿ ಹೇಳಿದರು.

ಬಿಜೆಪಿ 22 ಸ್ಥಾನ ಗೆದ್ರೆ, ಮರುದಿನವೇ ಕುಮಾರಸ್ವಾಮಿ ಮನೆಗೆ: ವೀರಪ್ಪ ಮೊಹ್ಲಿ ಎಚ್ಚರಿಕೆ!
ಎಚ್ ಡಿ ಕುಮಾರಸ್ವಾಮಿ-ವೀರಪ್ಪ ಮೊಯ್ಲಿ
Published On :
ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೇನಾದರೂ 22 ಸ್ಥಾನ ಬಂದರೆ ಮರುದಿನವೇ ಜೆಡಿಎಸ್ ನ ಮುಖ್ಯಮಂತ್ರಿ ಕುಮಾರಸ್ವಾಮಿ ಮನೆಗೆ ಹೋಗ್ತಾರೆ ಎಂದು ಮೈತ್ರಿ ಅಭ್ಯರ್ಥಿ ಡಾ. ಎಂ ವೀರಪ್ಪಮೊಯ್ಲಿ ಹೇಳಿದರು.
ಚಿಕ್ಕಬಳ್ಳಾಪುರ ಮೈತ್ರಿ ಅಭ್ಯರ್ಥಿಯಾಗಿರುವ ವೀರಪ್ಪಮೊಯ್ಲಿ ಅವರು ಬಾಗೇಪಲ್ಲಿಯ ತಿಮ್ಮಂಪಲ್ಲಿಯಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾತನಾಡಿ, ಬಿಎಸ್ ಯಡಿಯೂರಪ್ಪ ಅವರ ಕಣ್ಣು ಮುಖ್ಯಮಂತ್ರಿ ಕುರ್ಚಿ ಮೇಲೆ ಬಿದ್ದಿದೆ. ಅದಕ್ಕಾಗಿ ಅವರು ಒಂದಲ್ಲಾ ಒಂದು ರೀತಿಯಲ್ಲಿ ಸಮಿಶ್ರ ಸರ್ಕಾರವನ್ನು ಉರುಳಿಸುವ ಶತಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಮತದಾರರಲ್ಲಿ ಮನವಿ ಮಾಡಿದರು.
ಕೋಮುವಾದಿ ಬಿಜೆಪಿಯನ್ನು ದೂರವಿಡಲು ಹಾಗೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಎಂಬ ಕನಸು ನನಸಾಗದಂತೆ ಮಾಡಲು ಕಾಂಗ್ರೆಸ್ ಗೆ ಮತ ನೀಡಬೇಕು ಎಂದು ವೀರಪ್ಪ ಮೊಯ್ಲಿ ಕೇಳಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.