ಕುಂದಗೋಳ: ಹೆಚ್ಚಿನ ಮತದಾರರನ್ನು ಹೊಂದಿರುವ ಕುಟುಂಬ, ರಾಜಕೀಯದಲ್ಲಿ ಪ್ರಮುಖ ಪಾತ್ರ
ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಸುತಾರ್ ಕುಟುಂಬ ತಾಲೂಕಿನಲ್ಲಿಯೇ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಕುಟುಂಬ ಎಂದು ಹೆಸರಾಗಿದೆ. ಈ ಕುಟುಂಬದ ಸದಸ್ಯರು ಕೂಡಾ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಗುಡಿಗೇರಿ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಸುತಾರ್ ಕುಟುಂಬ ಯಾವುದೇ ಹಬ್ಬಕ್ಕೂ ಕಡಿಮೆ ಇಲ್ಲದಂತೆ ಮತದಾನದಲ್ಲಿ ಪಾಲ್ಗೊಂಡಿದ್ದರು.
ಈ ಕುಟುಂಬದಲ್ಲಿ22 ಅರ್ಹ ಮತದಾರರಿದ್ದು, ತಾಲೂಕಿನಲ್ಲಿಯೇ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಕುಟುಂಬ ಎಂದು ಹೆಸರಾಗಿದೆ. ಈ ಕುಟುಂಬದ ಸದಸ್ಯರು ಕೂಡಾ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ.
ಸುತಾರ್ ಕುಟುಂಬದ ನಾಲ್ಕು ತಲೆಮಾರಿನ ಸದಸ್ಯರು ಸ್ಥಳೀಯ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಈ ಕುಟುಂಬ 30 ಸದಸ್ಯರನ್ನು ಹೊಂದಿದೆ. ಈ ಬಾರಿ ಮೂವರು ಮೊದಲ ಬಾರಿಗೆ ಮತ ಚಲಾಯಿಸಿದ್ದಾರೆ. ನಿನ್ನೆದಿನ ಹುಬ್ಭಳಿಯಿಂದ ಬರಬೇಕಾದ ಹೊಸ ಮತದಾರರಿಗಾಗಿ ಕುಟುಂಬ ಕಾಯುತಿತ್ತು. ಅವರು ಬಂದ ನಂತರ ಎಲ್ಲರೂ ಒಟ್ಟಿಗೆ ಸೇರಿ ಮತ ಚಲಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


