ಸುಮಲತಾ ಅಂಬರೀಷ್ ಗೆಲುವು, ಮಂಡ್ಯ ಜನತೆಗೆ 'ಡಿಬಾಸ್' ಕೃತಜ್ಞತೆ
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರನ್ನು ಅಭೂತಪೂರ್ವವಾಗಿ ಗೆಲ್ಲಿಸಿರುವ ಜನತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರನ್ನು ಅಭೂತಪೂರ್ವವಾಗಿ ಗೆಲ್ಲಿಸಿರುವ ಜನತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.
ನೀವು ತೋರಿಸಿರುವ ಪ್ರೀತಿಗೆ ಪದಗಳೆ ಬರುತ್ತಿಲ್ಲ.ಸಣ್ಣ ಅಳಿಲು ಸೇವೆಗೆ ದೊಡ್ಡ ಮೊತ್ತದ ಜಯ ತಂದುಕೊಟ್ಟಿದ್ದು, ಸಾಯುವವರೆಗೂ ಚಿರಖುಣಿಯಾಗಿರುವುದಾಗಿ ಹೇಳಿದ್ದಾರೆ.
ಸುಮಲತಾ ಅಂಬರೀಷ್ ಅವರಿಗೆ ನೀಡಿರುವ ಗೆಲುವನ್ನು ತುಂಬಾ ಜೋಪಾನವಾಗಿ ಕಾಪಾಡಿಕೊಳ್ಳಲಿದ್ದಾರೆ. ತಮ್ಮ ಕೈಲಾದ ಸಹಾಯವನ್ನು ಖಂಡಿತವಾಗಿ ಮಾಡ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ದರ್ಶನ್, ನೀವೆ ನಮ್ಮ ಪಾಲಿನ ದೇವರಾಗಿದ್ದೀರಿ. ಮಂಡ್ಯ ಲೋಕಸಭಾ ಕ್ಷೇತ್ರದ ಪ್ರತಿಯೊಬ್ಬ ಮತದಾರರರ ನೆರವನ್ನು ಸಾಯುವವರೆಗೂ ಮರೆಯುವುದಿಲ್ಲ ಎಂದಿದ್ದಾರೆ.
ಸುಮಲತಾ ಅಂಬರೀಶ್ ಅಮ್ಮ ರವರ ಅಭೂತಪೂರ್ವ ಗೆಲುವಿಗೆ ಕಾರಣರಾದ ಮಂಡ್ಯದ ಆತ್ಮೀಯ ಮತದಾರ ಬಂಧುಗಳೆ ಮತ್ತು ನನ್ನೆಲ್ಲಾ ಪ್ರೀತಿಯ ಅಭಿಮಾನಿಗಳಿಗೆ ಹೃದಯ ಪೂರ್ವಕ ಧನ್ಯವಾದಗಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


