ಚಿಂಚೋಳಿ ವಿಧಾನಸಭೆ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ಗೆ ಗೆಲುವು
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಡಾ. ಉಮೇಶ್ ಜಾಧವ್ ಪುತ್ರ ಅವಿನಾಶ್ ...

Published On :
ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಡಾ. ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಗೆಲುವು ಸಾಧಿಸಿದ್ದಾರೆ.
ಡಾ.ಉಮೇಶ್ ಜಾಧವ್ ಅವರ ರಾಜೀನಾಮೆಯಿಂದಾಗಿ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿತ್ತು. ಬಿಜೆಪಿಯಿಂದ ಡಾ.ಅವಿನಾಶ್ ಜಾಧವ್, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಸುಭಾಷ್ ರಾಥೋಡ್ ಅವರು ಕಣದಲ್ಲಿದ್ದರು. ಮೇ 19ರಂದು ಚುನಾವಣೆ ನಡೆದಿತ್ತು. ಒಟ್ಟು 17 ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿ ಮತ್ತು ಮೈತ್ರಿಕೂಟದ ನಡುವೆ ಪೈಪೋಟಿ ಎದುರಾಗಿತ್ತು.
ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ.ಉಮೇಶ್ ಜಾಧವ್ ನಡುವಿನ ಪ್ರತಿಷ್ಠೆಯ ಕಣಣವಾಗಿತ್ತು. ಡಾ.ಉಮೇಶ್ ಜಾಧವ್ ಪುತ್ರ ಡಾ.ಅವಿನಾಶ್ ಜಾಧವ್ ಸೋಲಿಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪಣ ತೊಟ್ಟಿದ್ದರು. ಆದರೆ ಅದು ಸಾಧ್ಯವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


