ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡಗೆ ಹೀನಾಯ ಸೋಲು
ಸ್ಥಳೀಯ ಕಾಂಗ್ರೆಸ್ ಮುಖಂಡರ ವಿರೋಧದ ನಡುವೆಯೂ ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್ ಡಿ ದೇವೇಗೌಡ ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು ವಿರುದ್ಧ ಭಾರೀ ಹಿನ್ನಡೆ ಅನುಭವಿಸಿದ್ದಾರೆ.

Published On :
ತುಮಕೂರು: ಸ್ಥಳೀಯ ಕಾಂಗ್ರೆಸ್ ಮುಖಂಡರ ವಿರೋಧದ ನಡುವೆಯೂ ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್ ಡಿ ದೇವೇಗೌಡ ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು ಭಾರೀ ಹಿನ್ನಡೆ ಅನುಭವಿಸಿದ್ದಾರೆ.
ಬಸವರಾಜ್ ವಿರುದ್ಧ ದೇವೇಗೌಡರು 15,433 ಸಾವಿರ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ. ಮತ ಎಣಿಕೆ ಪ್ರಾರಂಭದಲ್ಲಿ ದೇವೇಗೌಡರು ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ 7 ನೇ ಸುತ್ತಿನ ಮತ ಎಣಿಕೆ ವೇಳೆಗೆ ತೀವ್ರ ಹಿನ್ನಡೆ ಎದುರಿಸಿರುವ ಮಾಜಿ ಪ್ರಧಾನಿ ದೇವೇಗೌಡ, ತೀವ್ರ ಮುಖಭಂಗ ಎದುರಿಸಿದ್ದಾರೆ.
ಮೈತ್ರಿ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧಿಸಿದ್ದ ಹೆಚ್ ಡಿ ದೇವೇಗೌಡ, ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರ ವಿರೋಧಕ್ಕೂ ಗುರಿಯಾಗಿದ್ದರು. 2014 ರಲ್ಲಿ ಸಂಸದರಾಗಿ ಆಯ್ಕೆಗೊಂಡಿದ್ದ ಕಾಂಗ್ರೆಸ್ ನ ಮುದ್ದ ಹನುಮೇಗೌಡ, ಮಧುಗಿರಿ ಕ್ಷೇತ್ರದ ಶಾಸಕ ಕೆಎನ್ ರಾಜಣ್ಣ ದೇವೇಗೌಡ ತುಮಕೂರಿನಿಂದ ಸ್ಪರ್ಧಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD Deve GowdaPoliticsTumkurಹೆಚ್ ಡಿ ದೇವೇಗೌಡBJP candidateLok Sabha Election Results 2019ಲೋಕಸಭಾ ಚುನಾವಣೆ 2019 ಫಲಿತಾಂಶತುಮಕೂರು ಬಿಜೆಪಿ ಅಭ್ಯರ್ಥಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


