ಸೋಲು ಖಚಿತವಾಗುತ್ತಿದ್ದಂತೆ ಮತಎಣಿಕೆ ಕೇಂದ್ರದಿಂದ ಕಾಲ್ಕಿತ್ತ ನಟ ಪ್ರಕಾಶ್ ರೈ!
ಬಿಜೆಪಿಯ ಸಾಂಪ್ರದಾಯಿಕ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ನಟ ಪ್ರಕಾಶ್ ರೈ ಪಕ್ಷೇತರ ಅಭ್ಯರ್ಥಿಯಾಗಿ ...

Published On :
ಬೆಂಗಳೂರು: ಬಿಜೆಪಿಯ ಸಾಂಪ್ರದಾಯಿಕ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ನಟ ಪ್ರಕಾಶ್ ರೈ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಬಿಜೆಪಿಯ ಪಿ,ಸಿ ಮೋಹನ್ ಮತ್ತು ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ವಿರುದ್ಧ ಕಣಕ್ಕಿಳಿದಿದ್ದ ಪ್ರಕಾಶ್ ರೈ ಇಂದು ತಮ್ಮ ಬೆಂಬಲಿಗರೊಂದಿಗೆ ಮತ ಎಣಿಕೆ ಸ್ಥಳದಲ್ಲಿ ಹಾಜರಿದ್ದರು.
ಕೆಲ ಸಮಯ ಮತ ಎಣಿಕೆ ಕೇಂದ್ರದಲ್ಲಿದ್ದ ಪ್ರಕಾಶ್ ರೈ ತಮ್ಮ ಸೋಲು ಖಚಿತವಾಗುತ್ತಿದ್ದಂತೆ, ನಗುತ್ತಾ ಅಲ್ಲಿಂದ ತಮ್ಮ ಬೆಂಬಲಿಗರೊಂದಿಗೆ ಅಲ್ಲಿಂದ ತೆರಳಿದ್ದಾರೆ. ಪ್ರಕಾಶ್ ರೈ ಮತ ಎಣಿಕೆ ಕಾರ್ಯದಿಂದ ಪೆಚ್ಚು ಮೊರೆ ಹಾಕಿಕೊಂಡು ಹೋಗುತ್ತಿರುವ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ವ್ಯಕ್ತಿಯೊಬ್ಬರು ಶೇರ್ ಮಾಡಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಹಾಲಿ ಸಂಸದ ಪಿ.ಸಿ ಮೋಹನ್4.9 ಲಕ್ಷ ಮತಗಳಿಸಿದ್ದಾರೆ, ರಿಜ್ವಾನ್ ಅರ್ಷದ್ 4.7 ಲಕ್ಷ. ಮತಗಳಿಸಿದ್ದಾರೆ, ಪ್ರಕಾಶ್ ರೈ ಕೇವಲ 28,980 ಮತಗಳಿಗೆ ತೃಪ್ತಿ ಪಟ್ಟುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
videoPoliticsರಾಜಕೀಯPrakash rajಪ್ರಕಾಶ್ ರೈವಿಡಿಯೋಮತ ಎಣಿಕೆ ಕೇಂದ್ರಬೆಂಗಳೂರು ಕೇಂದ್ರBengaluru Centralcounting centre
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


