ಕರ್ನಾಟಕ

ಚಾಮರಾಜನಗರ: ಗುರು - ಶಿಷ್ಯರ ರೋಚಕ ಹಣಾಹಣಿಯಲ್ಲಿ ಪ್ರಸಾದ್ ಗೆ ಗೆಲುವು

ಅಂತಿಮ ಸುತ್ತಿನ ಮತ ಎಣಿಕೆ ವರೆಗೂ ರೋಚಕ ಹಣಾಹಣಿ ಏರ್ಪಟ್ಟಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ 341 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಚಾಮರಾಜನಗರ: ಗುರು - ಶಿಷ್ಯರ ರೋಚಕ ಹಣಾಹಣಿಯಲ್ಲಿ ಪ್ರಸಾದ್ ಗೆ ಗೆಲುವು
ವಿ. ಶ್ರೀನಿವಾಸ್ ಪ್ರಸಾದ್
Published On :

ಚಾಮರಾಜನಗರ: ಅಂತಿಮ ಸುತ್ತಿನ ಮತ ಎಣಿಕೆ ವರೆಗೂ ರೋಚಕ ಹಣಾಹಣಿ ಏರ್ಪಟ್ಟಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ  ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ರಾಜಕೀಯದಲ್ಲಿ ಗುರು- ಶಿಷ್ಯರಾಗಿದ್ದ ವಿ. ಶ್ರೀನಿವಾಸ್ ಪ್ರಸಾದ್ ಹಾಗೂ  ಆರ್. ಧ್ರುವ ನಾರಾಯಣ್ ನಡುವಣ ಆರಂಭದಿಂದಲೂ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ವಿ. ಶ್ರೀನಿವಾಸ್ ಪ್ರಸಾದ್ ನಂತರ ಕೆಲ ಸುತ್ತುಗಳು  ಹಿನ್ನೆಡೆ ಅನುಭವಿಸಿದರು. ಆದರೆ,  ಕಡೆಯ 20 ನೇ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.

ಮತ ಎಣಿಕೆಯ ಕೊನೆಯ ಸುತ್ತಿನಲ್ಲಿ ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ  ಧ್ರುವ ನಾರಾಯಣ್ ಅವರನ್ನು ಮಣಿಸಿ ರೋಚಕ ರೀತಿಯಲ್ಲಿ ವಿ. ಶ್ರೀನಿವಾಸ್ ಪ್ರಸಾದ್ ಗೆಲುವಿನ ನಗೆ ಬೀರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.