ಸಾರ್ವಜನಿಕ ಸೇವೆ ನಿಲ್ಲಿಸುವುದಿಲ್ಲ -ಎಚ್. ಡಿ. ದೇವೇಗೌಡ ಸ್ಪಷ್ಟನೆ
ಸಮಾಜದ ಸುಧಾರಣೆಗಾಗಿ ದುಡಿಯುತ್ತಿರುವ ತಾವು ತಮ್ಮ ಸಾರ್ವಜನಿಕ ಸೇವೆಯನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಪರಾಜಿತ ಮೈತ್ರಿ ಅಭ್ಯರ್ಥಿ ಹೆಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಸಮಾಜದ ಸುಧಾರಣೆಗಾಗಿ ದುಡಿಯುತ್ತಿರುವ ತಾವು ತಮ್ಮ ಸಾರ್ವಜನಿಕ ಸೇವೆಯನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಪರಾಜಿತ ಮೈತ್ರಿ ಅಭ್ಯರ್ಥಿ ಹೆಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಟ್ವೀಟ್ ಮಾಡಿದ ಅವರು, ತಮಗೆ ಮತದಾನ ಮಾಡಿದ ಮತದಾರರಿಗೆ, ಚುನಾವಣೆ ಸಂದರ್ಭದಲ್ಲಿ ದುಡಿದ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಕಾರ್ಯಕರ್ತರಿಗೆ ಹಾಗೂ ತಮ್ಮನ್ನು ಬೆಂಬಲಿಸಿದ ಪ್ರತಿಯೊಬ್ಬರಿಗೂ ಆಭಾರಿಯಾಗಿರುವುದಾಗಿ ಅವರು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲಾ ಸಂಸದರಿಗೆ ಹಾಗೂ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಶುಭಾಶಯಗಳನ್ನು ಅವರು ಟ್ವೀಟ್ ಮೂಲಕ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


