ಸಾರ್ವತ್ರಿಕ ಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ, ಮೈತ್ರಿ ಸರ್ಕಾರ ಸುಭದ್ರ - ಪರಮೇಶ್ವರ್
ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮುಂದುವರೆಯುತ್ತದೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ.ಇದಕ್ಕೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಪಕ್ಷದ ಸಚಿವರು, ಶಾಸಕರು ಸಮ್ಮತಿ ಸೂಚಿಸಿದ್ದಾರೆ ಎಂದರು.
ಪ್ರತಿಪಕ್ಷ ಬಿಜೆಪಿಯ ಆಫರೇಷನ್ ಕಮಲ ಯಶಸ್ವಿ ಆಗೋವುದಿಲ್ಲ. ಸರ್ಕಾರ ಬೀಳಿಸುವ ಪ್ರಯತ್ನ ವಿಫಲ ಆಗಲಿದೆ. ರಾಜ್ಯಸರ್ಕಾರಕ್ಕೆ ಜನಾದೇಶ ಇದ್ದು, ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಗೆ ಅವಕಾಶ ನೀಡುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಗೃಹ ಸಚಿವ ಎಂಬಿ ಪಾಟೀಲ್, ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


