ಫೀಫಾ ವಿಶ್ವಕಪ್ 2018: ಇಂದಿನಿಂದ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು ಆರಂಭ
ತೀವ್ರ ಕುತೂಹಲ ಕೆರಳಿಸಿರುವ ಫೀಫಾ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಶುಕ್ರವಾರದಿಂದ ಟೂರ್ನಿಯ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು ಆರಂಭವಾಗಲಿವೆ.

Published On :
ಮಾಸ್ಕೋ: ತೀವ್ರ ಕುತೂಹಲ ಕೆರಳಿಸಿರುವ ಫೀಫಾ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ಶುಕ್ರವಾರದಿಂದ ಟೂರ್ನಿಯ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು ಆರಂಭವಾಗಲಿವೆ.
ಕ್ವಾರ್ಟರ್ ಫೈನಲ್ಸ್ ಹಂತದಲ್ಲಿ ಒಟ್ಟು 8 ತಂಡಗಳಿದ್ದು, ಉರುಗ್ವೆ, ಫ್ರಾನ್ಸ್, ಬ್ರೆಜಿಲ್-ಬೆಲ್ಜಿಯಂ, ರಷ್ಯಾ, ಕ್ರೊವೇಷಿಯಾ, ಸ್ವೀಡನ್ ಮತ್ತು ಇಂಗ್ಲೆಂಡ್ ತಂಡಗಳಿದ್ದು, ಈ ಪೈಕಿ ಇಂದು ನಡೆಯುವ ಮೊದಲೆರಡು ಪಂದ್ಯಗಳಲ್ಲಿ ಉರುಗ್ವೆ ತಂಡ ಪ್ರಬಲ ಫ್ರಾನ್ಸ್ ತಂಡವನ್ನು ಎದುರಿಸಲಿದ್ದು, ಆ ಬಳಿಕ ನಡೆಯುವ ಪಂದ್ಯದಲ್ಲಿ ಬ್ರೆಜಿಲ್ ತಂಡ ಬೆಲ್ಜಿಯಂ ತಂಡವನ್ನು ಎದುರಿಸಲಿದೆ.
ಉರುಗ್ವೆ ಮತ್ತು ಫ್ರಾನ್ಸ್ ನಡುವಿನ ಮೊದಲ ಕ್ವಾರ್ಟರ್ ಫೈನಲ್ಸ್ ಪಂದ್ಯ ಇಂದು ಸಂಜೆ 7.30ಕ್ಕೆ ಆರಂಭವಾಗಲಿದ್ದು, ಆ ಬಳಿಕ ಅಂದರೆ ರಾತ್ರಿ 11.30ಕ್ಕೆ ಬ್ರೆಜಿಲ್ ಮತ್ತು ಬೆಲ್ಜಿಯಂ ತಂಡಗಳ ನಡುವಿನ ಪಂದ್ಯ ಆರಂಭವಾಗಲಿದೆ.
ನಾಳೆ ರಷ್ಯಾ-ಕ್ರೊವೇಷಿಯಾ ಮತ್ತು ಸ್ವೀಡನ್ ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಗಾಗಿ ಸೆಣಸಾಡಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


