ರಷ್ಯಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ರೋಹಿತ್ ಶರ್ಮಾ
21ನೇ ಫಿಫಾ ವಿಶ್ವಕಪ್ ಪಂದ್ಯಾವಳಿಯ ಕಾವು ಜೋರಾಗಿದೆ. ಇದು ಕ್ರಿಕೆಟ್ ಪ್ರಿಯ ಭಾರತವನ್ನು ಬಿಟ್ಟಿಲ್ಲ...

Published On :
ನವದೆಹಲಿ: 21ನೇ ಫಿಫಾ ವಿಶ್ವಕಪ್ ಪಂದ್ಯಾವಳಿಯ ಕಾವು ಜೋರಾಗಿದೆ. ಇದು ಕ್ರಿಕೆಟ್ ಪ್ರಿಯ ಭಾರತವನ್ನು ಬಿಟ್ಟಿಲ್ಲ.
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ರಷ್ಯಾ ಪ್ರವಾಸದಲ್ಲಿದ್ದು ಫಿಫಾ ವಿಶ್ವಕಪ್ ಪಂದ್ಯಾವಳಿಯ ವೇಳೆ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ.
ಭಾರತದಲ್ಲಿ ಕ್ರಿಕೆಟ್ ಹೊರತಾಗಿ ಇತರೆ ಯಾವುದೇ ಕ್ರೀಡೆಗಳಿಗೆ ಬೆಂಬಲ ಸಿಗುತ್ತಿಲ್ಲ ಎಂಬ ಆರೋಪವಿದೆ. ಆದರೆ ದೇಶದಲ್ಲಿ ಫುಟ್ಬಾಲ್ ಕ್ರೀಡೆ ಅಭಿವೃದ್ಧಿಗೆ ಭಾರತೀಯ ಕ್ರಿಕೆಟಿಗರು ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.
ಇತ್ತೀಚೆಗಷ್ಟೇ ಭಾರತದ ಫುಟ್ಬಾಲ್ ಆಟಗಾರ ಸುನೀಲ್ ಛೆಟ್ರಿ ಪಡೆಯನ್ನು ಬೆಂಬಲಿಸಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಟ್ವೀಟ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaRohit Sharmaರೋಹಿತ್ ಶರ್ಮಾFIFA World Cupಫಿಫಾ ವಿಶ್ವಕಪ್FIFA World cup 2018ತ್ರಿವರ್ಣ ಧ್ವಜIndian flagಫಿಫಾ ವಿಶ್ವಕಪ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


