ನಾನು ಕ್ಷೇಮವಾಗಿದ್ದೇನೆ, ಭಾವೋದ್ವೇಗಕ್ಕೆ ಒಳಗಾಗಿ ಕುಸಿದುಬಿದ್ದಿದ್ದ ಫುಟ್ಬಾಲ್ ದಂತಕಥೆ ಮರಡೋನಾ!
2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ನೈಜಿರಿಯಾ ವಿರುದ್ಧದ ಪಂದ್ಯ ಅರ್ಜೇಂಟಿನಾಗೆ ಮಾಡು ಇಲ್ಲವೆ ಮಡಿ ಪಂದ್ಯವಾಗಿದ್ದು ಈ ಪಂದ್ಯದಲ್ಲಿ ಅರ್ಜೇಂಟಿನಾ...

Published On :
ಮಾಸ್ಕೋ(ರಷ್ಯಾ): 2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ನೈಜಿರಿಯಾ ವಿರುದ್ಧದ ಪಂದ್ಯ ಅರ್ಜೇಂಟಿನಾಗೆ ಮಾಡು ಇಲ್ಲವೆ ಮಡಿ ಪಂದ್ಯವಾಗಿದ್ದು ಈ ಪಂದ್ಯದಲ್ಲಿ ಅರ್ಜೇಂಟಿನಾ ಗೆಲುವು ಸಾಧಿಸುತ್ತಿದ್ದಂತೆ ವೀಕ್ಷಕ ಗ್ಯಾಲರಿಯಲ್ಲಿ ಕುಸಿದುಬಿದ್ದಿದ್ದ ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಅವರು ತಾನು ಕ್ಷೇಮವಾಗಿದ್ದೇನೆ ಎಂದು ಹೇಳಿದ್ದಾರೆ.
ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ. ಎಲ್ಲರಿಗೂ ನಾನು ಕ್ಷೇಮವಾಗಿದ್ದೇನೆ ಎಂದು ಹೇಳ ಬಯಸುತ್ತೇನೆ. ನಾನು ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
ಫೀಫಾ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನದಿಂದ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಅರ್ಜೆಂಟೀನಾ ತಂಡ ನಿನ್ನೆಯ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ನೈಜಿರಿಯಾ ವಿರುದ್ಧ 2-1 ಅಂತರದ ರೋಚಕ ಗೆಲುವು ಸಾಧಿಸಿತು. ಅಷ್ಟು ಮಾತ್ರವಲ್ಲದೇ ನಾಕೌಟ್ ಹಂತಕ್ಕೇರಿತು.
ಅತ್ತ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುತೂಹಲದಿಂದ ಪಂದ್ಯ ವೀಕ್ಷಣೆ ಮಾಡುತ್ತಿದ್ದ ಅರ್ಜೆಂಟೀನಾ ಫುಟ್ಬಾಲ್ ದಂತಕಥೆ ಮರಡೋನಾ ಭಾವೋದ್ವೇಗಕ್ಕೆ ಒಳಗಾಗಿ ಅನಾರೋಗ್ಯದಿಂದ ನೆಲಕ್ಕೆ ಕುಸಿದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Footballಅರ್ಜೆಂಟಿನಾಫುಟ್ಬಾಲ್ಲಿಯೋನಲ್ ಮೆಸ್ಸಿArgentinaನೈಜಿರಿಯಾLionel MessiMoscowಮಾಸ್ಕೋFIFA World cup 2018Diego Maradonaಫೀಫಾ ವಿಶ್ವಕಪ್ 2018Nygeriaಡಿಯಾಗೋ ಮರಡೋನಾ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


