ಫಿಫಾ ವಿಶ್ವಕಪ್ 2014

ಮೆಸ್ಸಿಗೆ ಡೋಪಿಂಗ್ ಪರೀಕ್ಷೆ

ಮೆಸ್ಸಿಗೆ ಡೋಪಿಂಗ್ ಪರೀಕ್ಷೆ
Published On :

ಸಾವೊ ಪೌಲೊ: ಹಾಲೆಂಡ್ ವಿರುದ್ಧ ಪೆನಾಲ್ಟಿ ಶೂಟೌಟ್‌ನಲ್ಲಿ ಗೆಲವು ದಾಖಲಿಸಿ ಫಿಫಾ ವಿಶ್ವಕಪ್‌ನ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ ಸಂಭ್ರಮದಲ್ಲಿ ಅರ್ಜೆಂಟೀನಾ ಆಟಗಾರರಿದ್ದರೆ, ತಂಡದ ನಾಯಕ ಲಯೋನಲ್ ಮೆಸ್ಸಿ ಮಾತ್ರ ಅಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಕಾರಣ ಅವರನ್ನು ಡೋಪಿಂಗ್ ಪರೀಕ್ಷೆಗಾಗಿ ಕರೆದೊಯ್ದಿದ್ದರು.
ಇಸ್ಟಾಗ್ರಾಮ್ ಸಾಮಾಜಿಕ ತಾಣದಲ್ಲಿ ಡೋಪಿಂಗ್ ಪರೀಕ್ಷೆಗೆ ತೆರಳಿದ್ದಾಗ ಚಿತ್ರವನ್ನು ಹಾಕಿಕೊಂಡಿರುವ ಮೆಸ್ಸಿ, ನನ್ನನ್ನು ಡೋಪಿಂಗ್ ಪರೀಕ್ಷೆಗೆ ಒಳಪಡಿಸಿರುವ ಹಿನ್ನೆಲೆಯಲ್ಲಿ ಗೆಲವಿನ ಸಂಭ್ರಮಾಚರಣೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ. ಈ ತಂಡದ ಭಾಗವಾಗಿರಲು ನನಗೆ ಹೆಮ್ಮೆಯಾಗುತ್ತದೆ ಎಂದು ತಿಳಿಸಿದ್ದಾರೆ.
ಇದೊಂದು ಮಹತ್ವದ ಪಂದ್ಯವಾಗಿತ್ತು. ನಾವು ಈಗ ಫೈನಲ್‌ಗೆ ಪ್ರವೇಶಿಸಿದ್ದು, ಕೇವಲ ಒಂದು ಹೆಜ್ಜೆ ಮಾತ್ರ ಬಾಕಿ ಉಳಿದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.