ಫಿಫಾ ವಿಶ್ವಕಪ್ 2014

ಬಾಲ್ ಮೇಳಕ್ಕೆ ಭವ್ಯ ತೆರೆ

ಮಾರಕಾನ ಕ್ರೀಡಾಂಗಣದಲ್ಲಿ ಭಾನುವಾರ 2014ರ ವಿಶ್ವಕಪ್ ಫುಟ್ಬಾಲ್ ಉತ್ಸವಕ್ಕೆ..

ಬಾಲ್ ಮೇಳಕ್ಕೆ ಭವ್ಯ ತೆರೆ
Published On :

ಜಾಗತಿಕ ಫುಟ್ಬಾಲ್ ಮೇಳಕ್ಕೆ ಭವ್ಯ ತೆರೆ ಬಿದ್ದಿದೆ. ಬ್ರೆಜಿಲ್‌ನ ರಿಯೋ ಡಿ ಜನೈರೋದ ಮಾರಕಾನ ಕ್ರೀಡಾಂಗಣದಲ್ಲಿ ಭಾನುವಾರ 2014ರ ವಿಶ್ವಕಪ್ ಫುಟ್ಬಾಲ್ ಉತ್ಸವಕ್ಕೆ ವರ್ಣಮಯ ಸಮಾರಂಭದ ಮೂಲಕ ತೆರೆ ಎಳೆಯಲಾಯಿತು. ಕೊಲಂಬಿಯಾದ ಖ್ಯಾತ ಪಾಪ್ ಗಾಯಕಿ ಶಕೀರಾ, ಬ್ರೆಜಿಲ್‌ನ ಗಾಯಕರಾದ ಐವೆಟೆ ಸ್ಯಾಂಗಾಲೊ, ಕರ್ಲಿನ್‌ಹೋಸ್ ಬ್ರೌನ್ ಮೆಕ್ಸಿಕೊದ ಗಿಟಾರು ವಾದಕ ಸಾಂಟಾನ, ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಮುಖ್ಯವಾಗಿ ಶಕೀರಾ ಅವರು ವಿಶ್ವಕಪ್‌ನ ಲಾ...ಲಾ...ಲಾ... ಗೀತೆ ಹಾಡುವ ಮೂಲಕ ಕ್ರೀಡಾಂಗಣದಲ್ಲಿ ತುಂಬಿ ತುಳುಕುತ್ತಿದ್ದ ಅಭಿಮಾನಿಗಳನ್ನು ಸಂಗೀತ ಸಾಗರದಲ್ಲಿ ತೇಲಿಸಿದರು. ಶಕೀರಾರ ಕಂಠದಿಂದ ಹರಿದುಬಂದ ಗಾನ ಸುಧೆ ವಿಶ್ವಕಪ್ ಫುಟ್ಬಾಲ್ ಉತ್ಸವದ ಮುಕ್ತಾಯಕ್ಕೆ ಕಳೆ ತಂದಿತು.  ಉಳಿದಂತೆ, ಬ್ರೆಜಿಲ್‌ನ ಸಾಂಪ್ರದಾಯಿಕ ನೃತ್ಯ 'ಸಾಂಬಾ ಡ್ಯಾನ್ಸ್‌' ಹಾಗೂ ಅಲ್ಲಿನ ಪರಂಪರೆ ಬಿಂಬಿಸುವ ಕಾರ್ಯಕ್ರಮಗಳು ಅನಾವರಣಗೊಂಡವು. ಅಸಂಖ್ಯಾತ ಕಲಾವಿದರು ವಿವಿಧ ಬಗೆಯ ಕಲಾ ಪ್ರದರ್ಶನ ನೀಡುವ ಮೂಲಕ ಹೊಸ ಮೆರಗು ತಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.