ಸೋಯಾಬೀನ್ ಕಬಾಬ್
ಸೋಯಾಬೀನ್ ಕಬಾಬ್ ಮಾಡುವ ವಿಧಾನ...

Published On :
ಬೇಕಾಗುವ ಪದಾರ್ಥಗಳು
- ಸೋಯಾ ಬೀನ್ - 20-25
- ಶುಂಠಿ-ಬೆಳ್ಳುಳ್ಳಿ ಪೇಸ್ಟ್ - ಸ್ವಲ್ಪ
- ಹಸಿ ಮೆಣಸಿನಕಾಯಿ - 6
- ಈರುಳ್ಳಿ - 2
- ಕೊತ್ತಂಬರಿ ಸೊಪ್ಪು - ಸ್ವಲ್ಪ
- ಖಾರದ ಪುಡಿ - ಸ್ವಲ್ಪ
- ಗರಂ ಮಸಾಲ - ಅರ್ಧ ಚಮಚ
- ಕರಿ ಮೆಣಸಿನ ಪುಡಿ - ಸ್ವಲ್ಪ
- ಎಣ್ಣೆ - 3-4 ಸ್ವಲ್ಪ
- ಮೊಸರು - 4 ಚಮಚ
- ಉಪ್ಪು - ರುಚಿಗೆ ತಕ್ಕಷ್ಟು
ಮಾಡುವ ವಿಧಾನ...
- ಸೋಯಾ ಬೀನ್'ನ್ನು ತೊಳೆದು 10 ನಿಮಿಷ ಬಿಸಿ ನೀರಿನಲ್ಲಿ ನೆನೆ ಹಾಕಬೇಕು.
- ನೆನೆದ ಸೋಯಾ ಬೀನ್ ಗೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಬೇಕು.
- ಮಿಕ್ಸಿ ಜಾರ್ ಒಂದಕ್ಕೆ ಹಸಿ ಮೆಣಸಿನಕಾಯಿ, ಈರುಳ್ಳಿ, ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ರುಬ್ಬಿಕೊಳ್ಳಬೇಕು. ನಂತರ ಇದನ್ನು ಸೋಯಾ ಬೀನ್ ಗೆ ಹಾಕಬೇಕು. ಈ ಮಿಶ್ರಣಕ್ಕೆ ಖಾರದ ಪುಡಿ, ಗರಂ ಮಸಾಲ ಪುಡಿ, ಮೊಸರು, ಕರಿ ಮೆಣಸಿನ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಅರ್ಧ ಗಂಟೆಗಳ ಕಾಲ ಬಿಡಬೇಕು.
- ಒಲೆದ ಬಾಣಲೆಯಿಟ್ಟು ಎಣ್ಣೆ ಹಾಕಬೇಕು. ಎಣ್ಣೆ ಕಾದ ನಂತರ ಮಸಾಲೆಯೊಂದಿಗೆ ನೆನೆದ ಸೋಯಾ ಬೀನ್ ಅನ್ನು ಚಿನ್ನದ ಬಣ್ಣ ಬರುವವರೆಗೆ ಕರಿದರೆ ಸೋಯಾ ಬೀನ್ ಕಬಾಬ್ ತಯಾರಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


