ಬೆಂಡೆಕಾಯಿ ಪಕೋಡ
ಬೆಂಡೆಕಾಯಿ ಪಕೋಡ ಮಾಡುವ ವಿಧಾನ...

Published On :
ಬೇಕಾಗುವ ಪದಾರ್ಥಗಳು
- ಬೆಂಡೆಕಾಯಿ - ಕಾಲು ಕೆಜಿ
- ಈರುಳ್ಳಿ - 4
- ಕಡಲೆ ಹಿಟ್ಟು- ಒಂದು ಬಟ್ಟಲು
- ಅಕ್ಕಿ ಹಿಟ್ಟು - 2 ಚಮಚ
- ಅಚ್ಚ ಖಾರದ ಪುಡಿ - 1 ಚಮಚ
- ಉಪ್ಪು - ರುಚಿಗೆ ತಕ್ಕಷ್ಟು
- ಎಣ್ಣೆ - ಕರಿಯಲು
ಮಾಡುವ ವಿಧಾನ...
- ಮೊದಲು ಬೆಂಡೆಕಾಯಿಯನ್ನು ಚೆನ್ನಾಗಿ ತೊಳೆದುಕೊಂಡು ಬಟ್ಟೆಯಲ್ಲಿ ಒರೆಸಿಕೊಳ್ಳಬೇಕು.
- ನಂತರ ಬೆಂಡೆಕಾಯಿಯನ್ನು ಸಣ್ಣದಾಗಿ ಹೋಳುಗಳಾಗಿ ಕತ್ತರಿಸಿಕೊಳ್ಳಬೇಕು.
- ಒಂದು ಪಾತ್ರೆ ತೆಗೆದುಕೊಂಡು ಅದಕ್ಕೆ ಕಡಲೆ ಹಿಟ್ಟು, ಅಕ್ಕಿ ಹಿಟ್ಟು, ಅಚ್ಚ ಖಾರದ ಪುಡಿ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ನೀರು ಹಾಕಿ ಸ್ವಲ್ಪ ಗಟ್ಟಿಯಾಗಿ ಕಲಸಿಕೊಳ್ಳಬೇಕು. ಇದಕ್ಕೆ ಕತ್ತರಿಸಿಕೊಂಡ ಈರುಳ್ಳಿ ಹಾಗೂ ಬೆಂಡೆಕಾಯಿಯನ್ನು ಹಾಕಿ ಕಲಸಿಕೊಳ್ಳಬೇಕು
- ಒಲೆಯ ಮೇಲೆ ಬಾಣಲೆಯೊಂದನ್ನು ಇಟ್ಟು ಎಣ್ಣೆ ಹಾಕಬೇಕು. ಎಣ್ಣೆ ಕಾದ ನಂತರ ಕಲಸಿಕೊಂಡ ಹಿಟ್ಟನ್ನು ಪಕೋಡಾ ಹಾಕಿದಂತೆ ಎಣ್ಣೆಗೆ ಹಾಕಿ ಚಿನ್ನದ ಬಣ್ಣ ಬರುವವರೆಗೆ ಕರಿದರೆ ರುಚಿಕರ ಬೆಂಡೆಕಾಯಿ ಪಕೋಡ ಸಿದ್ಧವಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


