ಆಲೂ ಬೋಂಡಾ
ಆಲೂ ಬೋಂಡಾ ಮಾಡುವ ವಿಧಾನ

Published On :
ಆಲೂ ಬೋಂಡಾ ಮಾಡಲು ಬೇಕಾಗುವ ಸಾಮಾಗ್ರಿಗಳು
- ಬೇಯಿಸಿದ ಆಲೂಗಡ್ಡೆ 3-4
- ಹಸಿ ಮೆಣಸಿನ ಕಾಯಿ 2
- 3/4 ಕಪ್ ಕಡಲೆ ಹಿಟ್ಟು ಮತ್ತು 1/4 ಕಪ್ ಸ್ವಲ್ಪ ಮೈದಾ
- ಗರಂ ಮಸಾಲ 1 ಚಮಚ
- ಅರಿಶಿಣ ಪುಡಿ 1/4 ಚಮಚ
- ಸ್ವಲ್ಪ ಕೊತ್ತಂಬರಿ ಸೊಪ್ಪು
- ರುಚಿಗೆ ತಕ್ಕ ಉಪ್ಪು
- ಎಣ್ಣೆ (ಡೀಪ್ ಫ್ರೈಗೆ)
ತಯಾರಿಸುವ ವಿಧಾನ:
- ಆಲೂಗಡ್ಡೆಯನ್ನು ಪ್ರೆಶರ್ ಕುಕ್ಕರ್ ನಲ್ಲಿ ಹಾಕಿ, ಸ್ವಲ್ಪ ಉಪ್ಪು ಮತ್ತು ಬೇಯಲು ತಕ್ಕ ನೀರು ಹಾಕಿ ಬೇಯಿಸಿ.
- ಬೇಯಿಸಿದ ಆಲೂಗೆಡ್ಡೆಯ ಸಿಪ್ಪೆ ಸುಲಿದು ಚೆನ್ನಾಗಿ ಹಿಸುಕಬೇಕು, ಅದಕ್ಕೆ ರುಚಿಗೆ ತಕ್ಕ ಉಪ್ಪು, ಗರಂ ಮಸಾಲ, ಕತ್ತರಿಸಿದ ಹಸಿ ಮೆಣಸಿನ ಕಾಯಿ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
- ನಂತರ ಆಲೂ ಮಿಶ್ರಣದಿಂದ ಚಿಕ್ಕ-ಚಿಕ್ಕ ಉಂಡೆಗಳನ್ನು ಕಟ್ಟಿ.
- ಈಗ ಮತ್ತೊಂದು ಪಾತ್ರೆಯಲ್ಲಿ ಮೈದಾ ಮತ್ತು ಕಡಲೆಹಿಟ್ಟು ಹಾಕಿ ಅದಕ್ಕೆ ರುಚಿಗೆ ತಕ್ಕ ಉಪ್ಪು ಹಾಕಿ ಮತ್ತು ನೀರು ಹಾಕಿ ಕಲೆಸಬೇಕು. ಮಿಶ್ರಣ ತುಂಬಾ ಗಟ್ಟಿಯಾಗಿರಬಾರದು, ನೀರು-ನೀರಾಗಿಯೂ ಇರಬಾರದು.
- ಈಗ ಬಾಣಲೆಯಲ್ಲಿ ಅರ್ಧದಷ್ಟು ಎಣ್ಣೆ ಹಾಕಿ ಕಾಯಿಸಬೇಕು, ಆಲೂಗೆಡ್ಡೆ ಮಿಶ್ರಣದಿಂದ ಕಟ್ಟಿದ ಉಂಡೆಗಳನ್ನುಮೈದಾದಲ್ಲಿ ಅದ್ದಿ ಕುದಿಯುತ್ತಿರುವ ಎಣ್ಣೆಗೆ ಹಾಕಿ ಕಂದು ಬಣ್ಣ ಬರುವಾಗ ತೆಗೆದರೆ ರುಚಿಕರವಾದ ಅಲೂ ಬೋಂಡಾ ರೆಡಿ.
- ರೆಡಿಯಾದ ಆಲೂಬೋಂಡಾವನ್ನು ಬಿಸಿ ಬಿಸಿ ಟೀ ಜೊತೆ ಸವಿಯಿರಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


