ರವೆ ಬರ್ಫಿ
ರುಚಿಕರವಾದ ರವೆ ಬರ್ಫಿ ಮಾಡುವ ವಿಧಾನ...

Published On :
ಬೇಕಾಗುವ ಪದಾರ್ಥಗಳು
- ತುಪ್ಪ - 2 ಚಮಚ
- ರವೆ - 1 ಬಟ್ಟಲು
- ಕೊಬ್ಬರಿ ತುರಿ - ಮುಕ್ಕಾಲು ಬಟ್ಟಲು
- ಕಾಲು- ಎರಡೂವರೆ ಬಟ್ಟಲು
- ಸಕ್ಕರೆ - 1 ಬಟ್ಟಲು
- ಬಾದಾಮಿ ಪುಡಿ - 2 ಚಮಚ
- ಗೋಡಂಬಿ ಪುಡಿ - 2 ಚಮಚ
- ಏಲಕ್ಕಿ ಪುಡಿ - ಸ್ವಲ್ಪ
ಮಾಡುವ ವಿಧಾನ...
- ಬಾಣಲೆ ತೆಗೆದುಕೊಂಡು ಅದಕ್ಕೆ ತುಪ್ಪವನ್ನು ಹಾಕಿ ಬಿಸಿ ಮಾಡಿಕೊಳ್ಳಬೇಕು. ನಂತರ ರವೆ ಹಾಕಿ ಕೆಂಪಗೆ ಹುರಿದುಕೊಳ್ಳಬೇಕು. ಬಳಿಕ ಕೊಬ್ಬರಿ ತುರಿ ಹಾಕಿ ಕೆಂಪಗೆ ಹುರಿದು ಪಕ್ಕಕ್ಕೆ ಇಟ್ಟುಕೊಳ್ಳಬೇಕು.
- ಮತ್ತೊಂದು ಪಾತ್ರೆಯನ್ನು ಒಲೆಯ ಮೇಲಿಟ್ಟು ಹಾಲನ್ನು ಹಾಕಿ ಚೆನ್ನಾಗಿ ಕಾಯಿಸಬೇಕು. ಬಳಿಕ ಈ ಹಾಲಿಗೆ ಹುರಿದುಕೊಂಡ ರವೆಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಒಲೆಯ ಮೇಲೆಯೇ 5 ನಿಮಿಷ ಕೈಯಾಡಿಸಬೇಕು.
- ನಂತರ ಸಕ್ಕರೆ, ಬಾದಾಮಿ, ಗೋಡಂಬಿ ಹಾಕಿ ಮಿಶ್ರಣ ಮಾಡಬೇಕು. ಏಲಕ್ಕಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
- ತುಪ್ಪ ಸವರಿದ ತಟ್ಟೆಗೆ ಈ ಮಿಶ್ರಣವನ್ನು ಹಾಕಿ ಸಮ ಮಾಡಿ, ಬಾದಾಮಿ ಚೂರುಗಳನ್ನು ಹಾಕಿ 5-10 ನಿಮಿಷ ಬಿಟ್ಟು ಬೇಕಾದ ಆಕಾರಕ್ಕೆ ಕತ್ತರಿಸಿದರೆ ರುಚಿಕರವಾದ ರವೆ ಬರ್ಫಿ ಸವಿಯಲು ಸಿದ್ಧ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


