ಮಶ್ರೂಮ್ ಮಸಾಲೆ
ರುಚಿಕರವಾದ ಮಶ್ರೂಮ್ ಮಸಾಲೆ ಮಾಡುವ ವಿಧಾನ...

Published On :
ಬೇಕಾಗುವ ಪದಾರ್ಥಗಳು
- ದನಿಯಾ- 2 ಚಮಚ
- ಕಾಳು ಮೆಣಸು- 1 ಚಮಚ
- ಲವಂಗ-3-4
- ಚಕ್ಕೆ-1-2
- ಎಲಕ್ಕಿ-1
- ಜೀರಿಗೆ- 1 ಚಮಚ
- ಎಣ್ಣೆ- 3 ಚಮಚ
- ಮಶ್ರೂಮ್ - 250 ಗ್ರಾಂ
- ಈರುಳ್ಳಿ- ಹೆಚ್ಚಿಕೊಂಡಿದ್ದು 1 ಬಟ್ಟಲು
- ಹಸಿಮೆಣಸಿನ ಕಾಯಿ- 2-3
- ಶುಂಠಿ,ಬೆಳ್ಳುಳ್ಳಿ- ಸಣ್ಣಗೆ ಹೆಚ್ಚಿದ್ದು 2 ಚಮಚ
- ಅಚ್ಚ ಖಾರದ ಪುಡಿ- 1 ಚಮಚ
- ಅರಿಶಿನಪುಡಿ- ಅರ್ಧ ಚಮಚ
- ಟೊಮೆಟೋ ರಸ- 1 ಬಟ್ಟಲು
- ಉಪ್ಪು- ರುಚಿಗೆ ತಕ್ಕಷ್ಟು
- ಬೆಲ್ಲ- ಸ್ವಲ್ಪ
- ಗೋಡಂಬಿ ಪೇಸ್ಟ್- 2 ಚಮಚ
- ಕಸೂರಿ ಮೇಥಿ- 1 ಚಮಚ
- ಫ್ರೆಶ್ ಕ್ರೀಮ್- 1 ಚಮಚ
- ಕೊತ್ತಂಬರಿ ಸೊಪ್ಪು- ಸಣ್ಣಗೆ ಹೆಚ್ಚಿದ್ದು ಸ್ವಲ್ಪ
ಮಾಡುವ ವಿಧಾನ...
- ಒಲೆಯ ಮೇಲೆ ಬಾಣಲೆ ಇಟ್ಟು ಕಾದ ನಂತರ ಅದಕ್ಕೆ ದನಿಯಾ, ಕಾಳು ಮೆಣಸು, ಲವಂಗ, ಚಕ್ಕೆ, ಎಲಕ್ಕಿ, ಜೀರಿಗೆ ಹಾಕಿ ಕೆಂಪಗೆ ಹುರಿದುಕೊಳ್ಳಬೇಕು. ನಂತರ ಮಿಕ್ಸಿ ಜಾರ್'ಗೆ ಹಾಕಿ ಪುಡಿ ಮಾಡಿಕೊಳ್ಳಬೇಕು.
- ನಂತರ ಇದೇ ಬಾಣಲೆಗೆ ಎಣ್ಣೆ ಹಾಕಿ ಮಧ್ಯಮ ಗಾತ್ರದಲ್ಲಿ ಕತ್ತರಿಸಿಕೊಂಡ ಮಶ್ರೂಮ್ ಗಳನ್ನು ಹಾಕಿ ಕೆಂಪಗೆ ಹುರಿದು ತೆಗೆದಿಟ್ಟುಕೊಳ್ಳಬೇಕು. ಇದೇ ಎಣ್ಣೆಯಲ್ಲಿಯೇ ಈರುಳ್ಳಿ, ಹಸಿಮೆಣಸಿನ ಕಾಯಿ, ಶುಂಠಿ,ಬೆಳ್ಳುಳ್ಳಿ ಹಾಕಿ ಕೆಂಪಗೆ ಹುರಿದು ಮಿಕ್ಸಿ ಜಾರ್'ಗೆ ಹಾಕಿ ಪೇಸ್ಟ್ ಮಾಡಿಕೊಳ್ಳಬೇಕು.
- ನಂತರ ಬಾಣಲೆಗೆ ಎಣ್ಣೆ ಹಾಕಿ ರುಬ್ಬಿಕೊಂಡ ಈರುಳ್ಳಿ ಮಿಶ್ರಣ, ಟೊಮೆಟೋ ರಸವನ್ನು ಹಾಕಿ 5 ನಿಮಿಷ ಕುದಿಯಲು ಬಿಡಬೇಕು. ನಂತರ ಅಚ್ಚಖಾರದ ಪುಡಿ, ಅರಿಶಿನ, ಉಪ್ಪು, ಬೆಲ್ಲ, ಈ ಹಿಂದೆ ಮಾಡಿಕೊಂಡ ಮಸಾಲೆ ಪುಡಿ, ಬಾದಾಮಿ ಪೇಸ್ಟ್, ಫ್ರೆಶ್ ಕ್ರೀಮ್, ಮಶ್ರೂಮ್ ಗಳನ್ನು ಹಾಕಿ 5 ನಿಮಿಷ ಕುದಿಸಿ, ಕೊತ್ತಂಬರಿ ಸೊಪ್ಪಿನೊಂದಿಗೆ ಅಲಂಕರಿಸಿದರೆ, ರುಚಿಕರವಾದ ಮಶ್ರೂಮ್ ಮಸಾಲೆ ಸವಿಯಲು ಸಿದ್ಧ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


