ಗಸಗಸೆ ಹೋಳಿಗೆ
ರುಚಿಕರವಾದ ಗಸಗಸೆ ಹೋಳಿಗೆ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...
ಗಸಗಸೆ-1 ಬಟ್ಟಲು
ಒಣ ಕೊಬ್ಬರಿ ತುರಿ- 1 ಬಟ್ಟಲು
ಬೆಲ್ಲ-3/4 ಬಟ್ಟಲು
ಎಲಕ್ಕಿ ಪುಡಿ-ಸ್ವಲ್ಪ
ಪೇಣಿ ರವೆ- 1/2 ಬಟ್ಟಲು
ಗೋಧಿಹಿಟ್ಟು-1/2 ಬಟ್ಟಲು
ಉಪ್ಪು- ಚಿಟಿಕೆ
ಅರಿಶಿನ-ಸ್ವಲ್ಪ
ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು
ಮಾಡುವ ವಿಧಾನ...
ಗಸಗಸೆ, ಕೊಬ್ಬರಿ ತುರಿ ಎರಡನ್ನು ನುಣ್ಣಗೆ ಪುಡಿ ಮಾಡಿಕೊಂಡು, ದಪ್ಪ ತಳದ ಪಾತ್ರ‍್ರೆಗೆ ಹಾಕಿ ಬೆಲ್ಲ ಎಲ್ಲಕ್ಕಿ ಪುಡಿ ಹಾಕಿ ನೀರು ಎರಡು ಚಮಚ ಹಾಕಿ ಒಲೆಯ ಮೇಲೆ ಇಟ್ಟು ಮಗುಚಿ ಗಟ್ಟಿಯಾದ ನಂತರ ಇಳಿಸಿ ಹೂರಣ ರೆಡಿ.
ಪೇಣಿರವೆ, ಗೋಧಿ ಹಿಟ್ಟು, ಸ್ವಲ್ಪ ಉಪ್ಪು, ಅರಿಶಿನ ಹಾಕಿ ಸ್ವಲ್ಪ ನೀರು ಹಾಕಿ ಚಪಾತಿ ಹಿಟ್ಟಿನಂತೆ ಕಲೆಸಿ ಮೂರು ಚಮಚ ಎಣ್ಣೆಹಾಕಿ ನಾದಿ ಎರಡು ಗಂಟೆಕಾಲ ನೆನೆಯಲು ಬಿಡಿ.
ಕಣಕವನ್ನು ಕೈಯಲ್ಲಿ ತೆಗೆದುಕೊಂಡು ಅಗಲ ಮಾಡಿ ಹೂರಣದ ಉಂಡೆ ಇಟ್ಟು ಮುಚ್ಚಿ ಹೋಳಿಗೆ ಶೀಟಿಗೆ ಎಣ್ಣೆ ಹಚ್ಚಿಕೊಂಡು ತುಂಬಿದ ಉಂಡೆ ಇಟ್ಟು ಲಟ್ಟಿಸಿ ಕಾದ ತವಾದ ಮೇಲೆ ಹಾಕಿ ಸಣ್ಣ ಉರಿಯಲ್ಲಿ ಎರಡೂ ಬದಿಯಲ್ಲಿ ಬೇಯಿಸಿದರೆ ರುಚಿಕರವಾದ ಗಸಗಸೆ ಹೋಳಿಗೆ ಸವಿಯಲು ಸಿದ್ಧ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


