ಸಿಹಿ ಪೇಡ - Sweet Peda Recipe in Kannada
ರುಚಿಕರವಾದ ಸಿಹಿ ಪೇಡ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...
ಹಾಲಿನ ಪುಡಿ- 1 ಬಟ್ಟಲು
ಸಕ್ಕರೆ ಪುಡಿ- 3/4 ಬಚ್ಚಲು
ತುಪ್ಪ- 2 ಚಮಚ
ಹಾಲು - 1/2 ಬಟ್ಟಲು
ಏಲಕ್ಕಿ ಪುಡಿ- ಸ್ವಲ್ಪ
ಮಾಡುವ ವಿಧಾನ...
ಮೊದಲು ಒಂದು ಪ್ಯಾನ್ ನಲ್ಲಿ 1 ಚಮಚ ತುಪ್ಪ ಹಾಕಿ ಕರಗಿಸಿ ನಂತರ ಹಾಲು ಸಕ್ಕರೆ ಪುಡಿ ಹಾಕಿ. ಸಕ್ಕರೆ ಕರಗಿದ ಮೇಲೆ ಹಾಲಿನ ಪುಡಿ, ಏಲಕ್ಕಿ ಪುಡಿ ಉದುರಿಸಿ ಚೆನ್ನಾಗಿ ಗಂಟಾಗದ ಹಾಗೆ ಕೈಯಾಡಿಸಿ.
ಮತ್ತೊಂದು ಚಮಚ ತುಪ್ಪ ಹಾಕಿ ತಳ ಬಿಡುವವರೆಗೂ ಮಿಶ್ರಣ ಮಾಡುತ್ತಲೇ ಇರಿ. ನಂತರ ಗ್ಯಾಸ್ ಆಫ್ ಮಾಡಿ ತಣ್ಣಗಾಗಲು ಬಿಡಿ. ಕೈಗೆ ತುಪ್ಪ ಸವರಿಕೊಂಡು ಚಿಕ್ಕ ಚಿಕ್ಕ ಉಂಡೆ ಮಾಡಿ ಪೇಡ ಬೇಕಾದ ಆಕಾರದಲ್ಲಿ ಸಿದ್ಧ ಪಡಿಸಿದರೆ ರುಚಿಯಾದ ಪೇಡ ಸವಿಯಲು ಸಿದ್ಧ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


