ಚಿಕನ್ ಕೈಮಾ ಬೋಂಡಾ- Chicken Keema Bonda Recipe in kannada
ರುಚಿಕರವಾದ ಚಿಕನ್ ಕೈಮಾ ಬೋಂಡಾ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...
ಚಿಕನ್ ಕೈಮಾ- 1/4 ಕೆ.ಜಿ
ಈರುಳ್ಳಿ -1
ಕಡಲೆ ಹಿಟ್ಟು-4 ಚಮಚ
ಮೈದಾ ಹಿಟ್ಟು-1 ಚಮಚ
ಕಾರ್ನ್ ಫ್ಲೋರ್- 1 ಚಮಚ
ಹಸಿಮೆಣಸಿನಕಾಯಿ- 2
ಶುಂಠಿ-ಬೆಳ್ಳುಳ್ಳಿ ಪೇಸ್ಟ್-1 ಚಮಚ
ಅಚ್ಚ ಖಾರದಪುಡಿ-2 ಚಮಚ
ಗರಂ ಮಸಾಲೆ ಪುಡಿ- ಸ್ವಲ್ಪ
ಕಾಳು ಮೆಣಸಿನ ಪುಡಿ- ಸ್ವಲ್ಪ
ಕರಿಬೇವು- ಸ್ವಲ್ಪ
ಕೊತ್ತಂಬರಿ ಸೊಪ್ಪು-ಸ್ವಲ್ಪ
ಉಪ್ಪು- ರುಚಿಗೆ ತಕ್ಕಷ್ಟು
ಎಣ್ಣೆ- ಕರಿಯಲು
ಮಾಡುವ ವಿಧಾನ...
ಚಿಕನ್ ಕೈಮಾವನ್ನು ಮಿಕ್ಸಿಯಲ್ಲಿ ಒಂದೆರೆಡು ಸುತ್ತು ರುಬ್ಬಕೊಳ್ಳಿ.
ಇದಕ್ಕೆ ಸಣ್ಣಗೆ ಕತ್ತರಿಸಿದ ಈರುಳ್ಳಿ, ಹಸಿಮೆಣಸಿನಕಾಯಿ, ಕರಿಬೇವು, ಕೊತ್ತಂಬರಿ, ಕಡಲೆಹಿಟ್ಟು, ಮೈದಾಹಿಟ್ಟು, ಕಾರ್ನ್‌ಫ್ಲೋರ್, ಕಾರದಪುಡಿ, ಗರಂಮಸಾಲಾ, ಮೆಣಸಿನಪುಡಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ, ನೀರು ಹಾಕದೆ ಚೆನ್ನಾಗಿ ಕಲಸಿ.
ಬಳಿಕ ಚಿಕ್ಕ ಚಿಕ್ಕ ಉಂಡೆಗಳನ್ನಾಗಿ ಮಾಡಿ ಕಾದ ಎಣ್ಣೆಗೆ ಹಾಕಿ ಸಣ್ಣ ಉರಿಯಲ್ಲಿ ಕರಿಯಿರಿ. ಇದೀಗ ರುಚಿಕರವಾದ ಕೈಮಾ ಬೋಂಡಾ ಸವಿಯಲು ಸಿದ್ಧ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


