ವೆಜಿಟೇಬಲ್ ಎಗ್ ಆಮ್ಲೆಟ್ - Vegetable egg omelette Recipe in Kannada
ರುಚಿಕರವಾದ ವೆಜಿಟೇಬಲ್ ಎಗ್ ಆಮ್ಲೆಟ್ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...
ಮೊಟ್ಟೆ – 4
ಈರುಳ್ಳಿ- 1
ಕ್ಯಾರೆಟ್-1
ಬೀನ್ಸ್- 5
ಹಸಿಮೆಣಸಿನಕಾಯಿ- 3
ಕ್ಯಾಪ್ಸಿಕಂ- 1/2
ಕೊತ್ತಂಬರಿ ಸೊಪ್ಪು-ಸ್ವಲ್ಪ
ಶುಂಠಿ-ಬೆಳ್ಳುಳ್ಳಿ ಪೇಸ್ಟ್- ಸ್ವಲ್ಪ
ಅರಿಶಿಣ ಪುಡಿ – 1/2 ಚಮಚ
ಕರಿಬೇವಿನ ಸೊಪ್ಪು– ಸ್ವಲ್ಪ
ಪೆಪ್ಪರ್‌ಪುಡಿ– ಅರ್ಧ ಚಮಚ
ಎಣ್ಣೆ- ಸ್ವಲ್ಪ
ಉಪ್ಪು ರುಚಿಗೆ ತಕ್ಕಷ್ಟು
ಮಾಡುವ ವಿಧಾನ...
ಈರುಳ್ಳಿ, ಕ್ಯಾರೆಟ್, ಬೀನ್ಸ್, ಕ್ಯಾಪ್ಸಿಕಂ, ಕೊತ್ತಂಬರಿ ಸೊಪ್ಪು, ಹಸಿಮೆಣಸಿನಕಾಯಿಗಳನ್ನು ಸಣ್ಣಗೆ ಕತ್ತರಿಸಿಟ್ಟುಕೊಳ್ಳಿ.
ಒಲೆಯ ಮೇಲೆ ಪಾತ್ರೆಯಿಟ್ಟು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ ಕಾದ ನಂತರ ಸಣ್ಣಗೆ ಕತ್ತರಿಸಿಕೊಂಡ ಹಸಿಮೆಣಸಿನಕಾಯಿ, ಕರಿಬೇವು, ಕ್ಯಾಪ್ಸಿಕಂ, ಈರುಳ್ಳಿ, ಕ್ಯಾರೆಟ್, ಬೀನ್ಸ್ ಎಲ್ಲವನ್ನು ಹಾಕಿ ಕೆಂಪಗೆ ಹುರಿದುಕೊಳ್ಳಿ. ನಂತರ ಕೊತ್ತಂಬರಿಸೊಪ್ಪು, ಪೆಪ್ಪರ್‌ಪುಡಿ, ಉಪ್ಪು ಮತ್ತು ಅರಿಶಿಣ ಪುಡಿ ಹಾಕಿ ಚೆನ್ನಾಗಿ ಫ್ರೈ ಮಾಡಿ.
ಇದು ತಣ್ಣಗಾದ ಬಳಿಕ ಮೊಟ್ಟೆಯನ್ನು ಒಡೆದು ಹಾಕಿ. ನಂತರ ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.
ಬಳಿಕ ಒಲೆಯ ಮೇಲೆ ಫ್ರೈ ಪ್ಯಾನ್ ಇರಿಸಿ ಎಣ್ಣೆ ಸವರಿ. ಖಾದ ನಂತರ ಮೊಟ್ಟೆ ಮಿಶ್ರಣವನ್ನು ಹಾಕಿ ದೋಸೆ ರೀತಿ ವೃತ್ತಾಕಾರದಲ್ಲಿ ಹರಡಬೇಕು. ಮುಚ್ಚಳ ಮುಚ್ಚಿ ಮಧ್ಯಮ ಉರಿಯಲ್ಲಿ ಒಂದು ಬದಿಯನ್ನು ಚೆನ್ನಾಗಿ ಬೇಯಿಸಿದ ನಂತರ ಮುಚ್ಚಳ ತೆಗೆದು, ಮಗುಚಿ ಹಾಕಿ ಇನ್ನೊಂದು ಬದಿಯನ್ನು ಚೆನ್ನಾಗಿ ಬೇಯಿಸಿ. ಇದೀಗ ರುಚಿಕರವಾದ ವೆಜಿಟೇಬಲ್ ಎಗ್ ಆಮ್ಲೆಟ್ ಸವಿಯಲು ಸಿದ್ಧ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


