ಅಡುಗೆ

ಪುದೀನ ಚಿಕನ್- Pudina chicken recipe in Kannada

ರುಚಿಕರವಾದ ಪುದೀನ ಚಿಕನ್ ಮಾಡುವ ವಿಧಾನ...

ಪುದೀನ ಚಿಕನ್- Pudina chicken recipe in Kannada
ಪುದೀನ ಚಿಕನ್
Published On :

ಬೇಕಾಗುವ ಪದಾರ್ಥಗಳು...

  • ಚಿಕನ್- ಅರ್ಧ ಕೆಜಿ

  • ಪುದೀನ- 1 ಬಟ್ಟಲು

  • ಈರುಳ್ಳಿ- 1

  • ಅರಿಶಿನ ಪುಡಿ- ಸ್ವಲ್ಪ

  • ಗರಂ ಮಸಾಲ ಪುಡಿ- ಅರ್ಧ ಚಮಚ

  • ಕಾಳು ಮೆಣಸಿನ ಪುಡಿ- ಕಾಲು ಚಮಚ

  • ಕರಿಬೇವು- ಸ್ವಲ್ಪ

  • ಚಕ್ರಮೊಗ್ಗು- 1

  • ದಾಲ್ಚಿನ್ನಿ ಅಥವಾ ಚಕ್ಕೆ - ಸ್ವಲ್ಪ

  • ಲವಂಗ - 5

  • ಏಲಕ್ಕಿ- 2

  • ಶುಂಠಿ- ಸ್ವಲ್ಪ

  • ಬೆಳ್ಳುಳ್ಳಿ- ಸ್ವಲ್ಪ

  • ಹಸಿ ಮೆಣಸಿನಕಾಯಿ- 5

  • ಕೊತ್ತಂಬರಿ ಸೊಪ್ಪು- ಸ್ವಲ್ಪ

  • ಅಡುಗೆ ಎಣ್ಣೆ - ಸ್ವಲ್ಪ

  • ಉಪ್ಪು- ರುಚಿಗೆ ತಕ್ಕಷ್ಟು

ಮಾಡುವ ವಿಧಾನ...

  • ಒಂದು ಮಿಕ್ಸಿ ಜಾರ್‌'ಗೆ ಪುದೀನ, ಕೊತ್ತಂಬರಿ ಸೊಪ್ಪು, ಹಸಿ ಮೆಣಸಿನ ಕಾಯಿ, ಶುಂಠಿ ಹಾಗೂ ಬೆಳ್ಳುಳ್ಳಿ ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಟ್ಟುಕೊಲ್ಳಿ.

  • ಈಗ ಒಲೆ ಮೇಲೆ ಒಂದು ಬಾಣಲೆ ಇಟ್ಟು ಅದಕ್ಕೆ ಎಣ್ಣೆ ಹಾಕಿ ಚಕ್ಕೆ, ಲವಂಗ, ಕಾಳು ಮೆಣಸು, ಪಲಾವ್ ಎಲೆ, ಚಕ್ಕೆ, ಚಕ್ರಮೊಗ್ಗು, ಹಾಗೆ ಸಣ್ಣದಾಗಿ ಕತ್ತರಿಸಿಕೊಂಡಿರುವ ಈರುಳ್ಳಿ ಹಾಕಿ ಫ್ರೈ ಮಾಡಿಕೊಳ್ಳಿ.

  • ಈರುಳ್ಳಿ ಹಾಕಿ 2 ನಿಮಿಷ ಫ್ರೈ ಮಾಡಿದ ಬಳಿಕ ಚೆನ್ನಾಗಿ ತೊಳದಿಟ್ಟುಕೊಂಡ ಚಿಕನ್ ಫೀಸ್‌ಗಳನ್ನು ಹಾಕಿ. ಬಳಿಕ ಅರಶಿಣ ಪುಡಿ ಹಾಕಿ ಮಿಶ್ರಣ ಮಾಡಿ.

  • ನಂತರ 5 ನಿಮಿಷ ಫ್ರೈ ಮಾಡಿಕೊಳ್ಳಬೇಕು. 5 ರಿಂದ 6 ನಿಮಿಷದ ಬಳಿಕ ಇದಕ್ಕೆ ಮಿಕ್ಸಿ ಜಾರ್‌ನಲ್ಲಿ ರುಬ್ಬಿದ್ದ ಮಸಾಲೆಯನ್ನು ಹಾಕಿ.

  • ಬಳಿಕ ಸ್ವಲ್ಪ ನೀರು ಸಹ ಹಾಕಿಕೊಂಡು ಚೆನ್ನಾಗಿ ಮಿಶ್ರಣ ಮಾಡಿ. ಈ ವೇಳೆ ರುಚಿಗೆ ತಕ್ಕಷ್ಟು ಉಪ್ಪು ಕೂಡ ಹಾಕಿಕೊಂಡು ಮಿಕ್ಸ್ ಮಾಡಿ. ಈಗ ಇದಕ್ಕೆ ಕಾಳು ಮೆಣಸಿನ ಪುಡಿ, ಗರಂ ಮಸಾಲಾ ಪುಡಿ ಹಾಕಿ ಮಿಶ್ರಣ ಮಾಡಿ.

  • ಮುಚ್ಚಳ ಮುಚ್ಚಿ 10 ನಿಮಿಷ ಬೇಯಲು ಬಿಡಿ. ಆಗಾಗ ತಳ ಹಿಡಿಯದಂತೆ ಕೈಯಾಡಿಸುತ್ತಿರಿ. ಬಳಿಕ ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಹಾಕಿ ಅಲಂಕರಿಸಿ. ಇದೀಗ ರುಚಿಕರವಾದ ಪುದೀನಾ ಚಿಕನ್ ಗ್ರೇವಿ ಸವಿಯಲು ಸಿದ್ಧ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.