ಆಲೂ ಸೇವ್ - Aloo sev recipe in Kannada
ರುಚಿಕರವಾದ ಆಲೂ ಸೇವ್ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...
ಆಲೂಗಡ್ಡೆ -4
ಅಕ್ಕಿ ಹಿಟ್ಟು- 1 ಬಟ್ಟಲು
ಉಪ್ಪು- ರುಚಿಗೆ ತಕ್ಕಷ್ಟು
ಅಚ್ಚ ಖಾರದ ಪುಡಿ- 1 ಚಮಚ
ಅರಿಶಿಣದ ಪುಡಿ- ಅರ್ಧ ಚಮಚ
ಎಣ್ಣೆ- ಕರಿಯಲು ಅಗತ್ಯವಿದ್ದಷ್ಟು
ಮಾಡುವ ವಿಧಾನ...
ಮೊದಲಿಗೆ ಕುಕ್ಕರ್ ನಲ್ಲಿ ಆಲೂಗಡ್ಡೆಯನ್ನು ಹಾಕಿ ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ಸಿಪ್ಪೆ ತೆಗೆದು ನುಣ್ಣಗೆ ಮಾಡಿಕೊಳ್ಳಿ
ಇದಕ್ಕೆ ಅಕ್ಕಿ ಹಿಟ್ಟು, ಉಪ್ಪು, ಖಾರದ ಪುಡಿ, ಅರಿಶಿಣದ ಪುಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.
ಇದೀಗ ಒಲೆ ಮೇಲೆ ಒಂದು ಪಾತ್ರೆ ಇಟ್ಟು ಅದಕ್ಕೆ ಎಣ್ಣೆ ಹಾಕಿ ಕಾಯಲು ಬಿಡಿ. ಈಗ ಚಕ್ಕುಲಿ ಅಚ್ಚು ತೆಗೆದುಕೊಂಡು ರೆಡಿ ಮಾಡಿಕೊಂಡಿರುವ ಹಿಟ್ಟನ್ನು ಅದರ ಒಳಗೆ ಹಾಕಿ ನೇರವಾಗಿ ಎಣ್ಣೆಯೊಳಗೆ ಬಿಡಿ. ಚಕ್ಕುಲಿ ಎಷ್ಟು ಉದ್ದವಾದರು ಬರಲಿ ಅಥವಾ ಸಣ್ಣದಾಗಿ ಕಟ್ ಆದರೂ ಸಮಸ್ಯೆಯಿಲ್ಲ. ಬಳಿಕ ಚೆನ್ನಾಗಿ ಕರಿಯಲು ಬಿಡಿ. ಸಣ್ಣ ಉರಿಯಲ್ಲಿ ಗರಿಗರಿಯಾಗುವಂತೆ ಕರಿದರೆ ರುಚಿಕರವಾದ ಆಲೂ ಸೇವ್ ಸವಿಯಲು ಸಿದ್ಧ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


